ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ 
ರಾಜ್ಯ

ಡ್ರಗ್ಸ್ ದಂಧೆಕೋರರ ವಿರುದ್ಧ ಕಠಿಣ ಕ್ರಮ: ಉಪ ಮುಖ್ಯಮಂತ್ರಿ ಪರಮೇಶ್ವರ

ಸಮಾಜದಲ್ಲಿ ಮಾದಕ ವಸ್ತು ತೊಲಗಿಸುವ ಕೆಲಸದಲ್ಲಿ ಪೊಲೀಸರಿಗೆ ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಸಹಕಾರ ಬಹುಮುಖ್ಯವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ...

ಬೆಂಗಳೂರು: ಸಮಾಜದಲ್ಲಿ ಮಾದಕ ವಸ್ತು ತೊಲಗಿಸುವ ಕೆಲಸದಲ್ಲಿ ಪೊಲೀಸರಿಗೆ ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಸಹಕಾರ ಬಹುಮುಖ್ಯವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ. 
ನಗರದ ನಿಮ್ಹಾನ್ಸ್ ಸಂಸ್ಥೆಯ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ಮಾದಕ ವಸ್ತುಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾದಕ ವಸ್ತು ಮಾರಾಟ ನಿಯಂತ್ರಣಕ್ಕೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತಹ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.
ಇಂದು ದೇಶದಲ್ಲಿ ಮಾದಕ ವಸ್ತು ಜಾಲಕ್ಕೆ ಸಿಲುಕಿ ಪಂಜಾಬ್ ರಾಜ್ಯವು ನಲುಗಿದೆ. ಈಗಾ ಆ ವಿಷಯದ ಜಾಲವು ಎಲ್ಲಾ ರಾಜ್ಯಗಳಿಗೂ ವ್ಯಾಪಿಸಿದ್ದು, ಬೆಂಗಳೂರಿನಲ್ಲೇ ಡ್ರಗ್ಸ್ ಉತ್ಪಾದಿರುವ ಮಟ್ಟಿದೆ ದಂಧೆ ಬೆಳೆದಿರುವುದು ಆತಂಕ ಹುಟ್ಟಿಸುತ್ತದೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳು ತಿಳುವಳಿಕೆ ಹೇಳಬೇಕು. ಈ ದಂಧೆ ವಿರುದ್ಧ ಹೋರಾಟದಲ್ಲಿ ಸಾರ್ವಜನಿಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಹಕಾರವು ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ. 
ಬಳಿಕ ಮಾತನಾಡಿದ ನಿಮ್ಹಾನ್ಸ್ ನಿರ್ದೇಶಕ ಡಾ.ಬಿ.ಎನ್. ಗಂಗಾಧರ್ ಅವರು, ಮಾದಕ ದ್ರವ್ಯ ಮುಕ್ತ ಸಮಾಜ ನಮಗೆ ಬೇಕಿದೆ. ಮಾದಕ ವ್ಯಸನದ ವಿರುದ್ಧದ ಪ್ರಚಾರಕ್ಕೆ ನಮ್ಮದು ಪ್ರಾದೇಶಿಕ ಕೇಂದ್ರವಾಗಿದೆ. ಚಟ ಬಿಡಿಸುವ ಕೇಂದ್ರಗಳನ್ನು ನಾವು ಹೊಂದಿದ್ದೇವೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ನಾವು ವಿವಿಧ ರಾಜ್ಯಗಳಲ್ಲಿ ನಡೆಸುತ್ತಿದ್ದಾರೆ. ತರಬೇತಿ ನರ್ಸ್ ಗಳು, ವೈದ್ಯರ ಕಾರ್ಯನಿರ್ವಹಿಸುತ್ತಿದ್ದಾರೆಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT