ಖಾಸಗಿ ಮತ್ತು ಸರ್ಕಾರಿ ಬಸ್ ಅಪಘಾತ 
ರಾಜ್ಯ

ತುಮಕೂರು: ಸರ್ಕಾರಿ-ಖಾಸಗಿ ಬಸ್ ನಡುವೆ ಭೀಕರ ಅಪಘಾತ, ನಾಲ್ವರು ಸಾವು

ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ...

ಶಿರಾ (ತುಮಕೂರು): ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಾಲಕ ಸೇರಿದಂತೆ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಶಿರಾ ಬಳಿ ನಡೆದಿದೆ.
ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಶಿರಾ ತಾಲೂಕಿನ ಕಳ್ಳಂಬೆಳ್ಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು,  ಖಾಸಗಿ ಬಸ್ ನಲ್ಲಿದ್ದ ಮೂವರು ಹಾಗೂ ವಾಯುವ್ಯ ಸಾರಿಗೆ ಸಂಸ್ಥೆ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ. ಇನ್ನು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. 
ಮೃತರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಾಲಕರಾಗಿದ್ದ ಸಹಾಯಕ ಸಬ್ ಇನ್ಸ್ ಪೆಕ್ಟರ್ ರಮೇಶ್ ಪರಮೇಶ್ವರ್ ನಾಯಕ್(52), ಬೆಂಗಳೂರಿನ ಸಹಕಾರ ನಗರದ ನಿವಾಸಿ ನಿಖಿತಾ(27), ಖಾಸಗಿ ಬಸ್ ಸೀಬರ್ಡ್ ಚಾಲಕ ಧನರಾಜ್(35) ಹಾಗೂ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಬಾಗಲಕೋಟೆ ನಿವಾಸಿ ದೀಪಕ್ ಮಣ್ಣನವರ್(34) ಎಂದು ಗುರುತಿಸಲಾಗಿದೆ.
ಅಪಘಾತ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಅಪಘಾತದಲ್ಲಿ ಗಾಯಗೊಂಡಿರುವವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!