ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಗೋವಿನ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ದೂರು ದಾಖಲಿಸಿದ್ದಾರೆ.
ಗೋವಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾರಣಕ್ಕೆ ನಗರದ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಕಿರಣ್ ಎನ್ ಎಂಬುವರು ರೈ ಗೋವಿನ ಹೇಳಿಕೆ ವಿರುದ್ಧ ಪಿಸಿಆರ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚನೆ ಮೇರೆಗೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ರೈ ವಿರುದ್ಧ 295 ಎ ಮತ್ತು 504 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ನಟ ಪ್ರಕಾಶ್ ರೈ, ನಿಮ್ಮ ಕೆಲಸವೇನಿದ್ದರೂ ಸುಳ್ಳು ಕೇಸ್ ಗಳನ್ನು ದಾಖಲಿಸುವುದಷ್ಟೇ.. ನನ್ನನ್ನು ಓರ್ವ ಹಿಂದೂ ವಿರೋಧಿ ಎಂದು ಬಿಂಬಿಸುವುದು ನಿಮ್ಮ ಕಾರ್ಯ.. ಏಕೆಂದರೆ ನಿಮ್ಮ ತಪ್ಪುಗಳನ್ನು ನಾನು ನೇರವಾಗಿ ಪ್ರಶ್ನಿಸುತ್ತೇನೆ.. ನೀವು ಎಷ್ಟೇ ಕೇಸುಗಳ ಜಡಿದರೂ ನನ್ನ ನೇರ ನುಡಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ರೈ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics