ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಜನರ ಆಶೀರ್ವಾದವಿದ್ದರೆ 2023ಕ್ಕೆ ಮತ್ತೆ ಸಿಎಂ ಆಗುತ್ತೇನೆ; ಸಿದ್ದರಾಮಯ್ಯ

ಜನರ ಆಶೀರ್ವಾದವಿದ್ದರೆ ಮತ್ತೆ 2023ರಲ್ಲಿ ಮುಖ್ಯಮಂತ್ರಿಯಾಗುವೆ ಎಂದು ಮಾಜಿ ಮುಖ್ಯಮಂತ್ರಿ ...

ಹುಬ್ಬಳ್ಳಿ: ಜನರ ಆಶೀರ್ವಾದವಿದ್ದರೆ ಮತ್ತೆ 2023ರಲ್ಲಿ ಮುಖ್ಯಮಂತ್ರಿಯಾಗುವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ತಮಗೆ ಇನ್ನೂ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿ ಉಳಿಯುವ ಆಸೆಯಿದೆ ಎಂಬ ಭಾವನೆಯನ್ನು ಹೊರಹಾಕಿದ್ದಾರೆ.

ಕೆಲ ದಿನಗಳ ಹಿಂದೆ ಜನರ ಆಶೀರ್ವಾದ ಸಿಕ್ಕಿದರೆ ಮತ್ತೆ ಸಿಎಂ ಆಗುತ್ತೇನೆ ಎಂದು ಸಿದ್ದರಾಮಯ್ಯನವರು ಹೇಳಿದ್ದು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಸಮ್ಮಿಶ್ರ ಸರ್ಕಾರದಲ್ಲಿ ಎರಡು ಪಕ್ಷಗಳ ನಡುವೆ ಹೊಂದಾಣಿಕೆಯಿಲ್ಲವೇ, ಮೈತ್ರಿ ಮುರಿದು ಹೋಗುತ್ತದೆಯೇ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಮಧ್ಯೆ ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈಗ ಸಿಎಂ ಆಗುತ್ತೇನೆಂದು ನಾನು ಎಲ್ಲಿ ಹೇಳಿದ್ದೇನೆ, ಜನರ ಆಶೀರ್ವಾದ, ಪ್ರೀತಿ ಸಿಕ್ಕಿದರೆ 2023ರ ಚುನಾವಣೆ ನಂತರ ಮತ್ತೆ ಸಿಎಂ ಆಗುತ್ತೇನೆ ಎಂದು ಹೇಳಿದ್ದೆ, ನನ್ನ ಹೇಳಿಕೆಗೆ ನಮ್ಮ ಶಾಸಕರು ಮತ್ತು ನಾಯಕರು ಬೆಂಬಲ ಸೂಚಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಈಗ ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾರೆ, ಈ ಸರ್ಕಾರಕ್ಕೆ ಏನೂ ಧಕ್ಕೆಯಿಲ್ಲ, ಸಂಪೂರ್ಣ 5 ವರ್ಷ ಆಡಳಿತ ನಡೆಸಲಿದೆ, ಬಿಜೆಪಿಯವರು ಕನಸು ಕಾಣುತ್ತಿದ್ದಾರಷ್ಟೆ ಎಂದು ಹೇಳಿದರು.

ಹಿಂದಿನ ನನ್ನ ಸರ್ಕಾರ ಘೋಷಿಸಿರುವ ಯೋಜನೆಗಳನ್ನು ಇಂದಿನ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮುಂದುವರಿಸಿಕೊಂಡು ಹೋಗಲಿದೆ, ಯೋಜನೆಗಳಿಗೆ ಹಣ ಬಿಡುಗಡೆಯಾಗಲಿದೆ, ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅದನ್ನು ಹಿಂದಿನ ಸಮನ್ವಯ ಸಮಿತಿ ಸಭೆಯಲ್ಲಿ ಹೇಳಿದ್ದಾರೆ, ನಾಳೆ ನಡೆಯುವ ಸಭೆಯಲ್ಲಿ ಕೂಡ ಚರ್ಚೆ ನಡೆಸುತ್ತೇವೆ, ಸಮ್ಮಿಶ್ರ ಸರ್ಕಾರದ ಯೋಜನೆಗಳು ಮತ್ತು ಕೆಲಸಗಳ ಯಶಸ್ಸು ಎರಡೂ ಪಕ್ಷಗಳಿಗೆ ಸಲ್ಲುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್