ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಟ್ವಿಟರ್'ಗೆ ಎಂಟ್ರಿ!
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ಪ್ರವೇಶಿಸಿದ್ದಾರೆ...
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ಪ್ರವೇಶಿಸಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಶತದಿನ ಪೂರೈಸಿದ ದಿನವೇ ದೇವೇಗೌಡ ಅವರು ಸಾಮಾಜಿಕ ಜಾಲತಾಣ ಟ್ವಿಟರ್'ಗೆ ಅಧಿಕೃತವಾಗಿ ಪ್ರವೇಶ ಮಾಡಿದ್ದಾರೆ. ಅಲ್ಲದೆ, ನೂರು ದಿನ ಪೂರೈಸಿರುವ ಪುತ್ರ ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಶುಭ ಹಾರೈಸುವ ಮೂಲಕ ಮೊಟ್ಟ ಮೊದಲ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರದ ಹಿರಿಯ ರಾಜಕಾರಣಿಯಲ್ಲಿ ಒಬ್ಬರಾಗಿರುವ ದೇವೇಗೌಡ ಅವರು ಟ್ವಿಟರ್'ಗೆ ಪ್ರವೇಶಿಸುತ್ತಿದ್ದಂತೆಯೇ ಪುತ್ರ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಶತದಿನದ ಶುಭ ಹಾರೈಕೆ ಮಾಡಿದ್ದಾರೆ. ಅಲ್ಲದೆ, ಮೈತ್ರಿಕೂಟದಲ್ಲಿರುವ ಎಲ್ಲಾ ನಾಯಕರು, ಸಚಿವರು, ಶಾಸಕರಿಗೆಲ್ಲಾ ಶುಭ ಕೋರಿದ್ದಾರೆ.
ಸಮ್ಮಿಶ್ರ ಸರ್ಕಾರವು 5 ವರ್ಷಗಳ ಕಾಲ ಜನಪರ ಆಡಳಿತ ನಡೆಸುವ ಮೂಲಕ ರಾಜ್ಯದ ಅಭಿವೃದ್ಧಿ ಹೊಸ ಎತ್ತರಕ್ಕೇರಲಿ ಎಂದು ಶುಭ ಹಾರೈಸಿಸಿದ್ದಾರೆ.
ಖಾತೆ ಆರಂಭಿಸಿರುವ ದೇವೇಗೌಡ ಅವರು ಸದ್ಯಕ್ಕೆ ಎರಡು ಖಾತೆಗಳನ್ನು ಮಾತ್ರ ಫಾಲೋ ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಖಾಸಗಿ ಖಾತೆ ಮತ್ತು ಸಿಎಂ ಆಫ್ ಕರ್ನಾಟಕ ಖಾತೆಯನ್ನು ಮಾತ್ರ ಫಾಲೋ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.