ನಟಿ ಭಾವನಾ ರಾಮಣ್ಣ 
ರಾಜ್ಯ

ಬಯಲು ರಂಗಮಂದಿರ ಕಾಮಗಾರಿ ವಿವಾದ : ನಟಿ ಭಾವನಾ ರಾಮಣ್ಣಗೆ ಕನ್ನಡ ಸಂಸ್ಕೃತಿ ಇಲಾಖೆ ನೋಟಿಸ್

ಹೂವು ಪೌಂಢೇಷನ್ ಗೆ ನೀಡಿರುವ 60 ಲಕ್ಷ ರೂಪಾಯಿ ನಿಧಿ ಬಳಕೆ ಬಗ್ಗೆ ಮಾಹಿತಿ ನೀಡುವಂತೆ ನಟಿ ಭಾವನಾ ರಾಮಣ್ಣ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟಿಸ್ ನೀಡಿದೆ.

ಬೆಂಗಳೂರು: ಹೂವು ಪೌಂಢೇಷನ್ ಗೆ ನೀಡಿರುವ 60 ಲಕ್ಷ ರೂಪಾಯಿ ನಿಧಿ ಬಳಕೆ ಬಗ್ಗೆ  ಮಾಹಿತಿ ನೀಡುವಂತೆ ನಟಿ ಭಾವನಾ ರಾಮಣ್ಣ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟಿಸ್ ನೀಡಿದೆ.

ಸರ್ಕಾರಿ ಕಲಾ ಕಾಲೇಜ್ ಆವರಣದ ಬಳಿ ಬಯಲು ರಂಗಮಂದಿರ ನಿರ್ಮಾಣ ವಿವಾದ  ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟಿಸ್ ನೀಡಿದ್ದು, ಹೂವು ಪೌಂಢೇಷನ್ ಗೆ ನೀಡಿರುವ ಹಣದ ಸದ್ಬಳಕೆ ಕುರಿತಂತೆ ಸಮಗ್ರ ಮಾಹಿತಿ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ.

ರಂಗಮಂದಿರ ನಿರ್ಮಾಣ ವಿವಾದಕ್ಕೊಳಪಟ್ಟ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಭಾವನಾ ರಾಮಣ್ಣ,  ಹಿಂದಿನ ಸರ್ಕಾರ ಕಾಮಗಾರಿ ಮಂಜೂರು ಮಾಡಿದ್ದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 60 ಲಕ್ಷ ಬಿಡುಗಡೆಯಾಗಿತ್ತು ಎಂದು ಹೇಳಿದ್ದರು.

ಈ ಹೇಳಿಕೆಯನ್ನು ಪರಿಗಣಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಭಾವನಾ ರಾಮಣ್ಣ ನಡೆಸುತ್ತಿರುವ ಟ್ರಸ್ಟಿಗೆ ಹಣ ಬಿಡುಗಡೆ ಮಾಡಲಾಗಿದೆ. ಆದರೆ. ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಹಣ  ಬಿಡುಗಡೆ ಮಾಡಲಾಗಿದೆಯೇ ಹೊರತು ಯಾವುದೇ ಕಟ್ಟಡ ಅಥವಾ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ಈ ನೋಟಿಸ್ ನೀಡಲಾಗಿದೆ . ಒಂದು ವೇಳೆ ಆ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿದ್ದರೆ , ಅದನ್ನು ವಾಪಾಸ್ ಪಡೆಯಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

 ಭಾವನಾ ರಾಮಣ್ಣ ಅವರಿಂದ ಪ್ರತಿಕ್ರಿಯೆಗಾಗಿ ಕಾಯಲಾಗುತ್ತಿದೆ. ಒಂದು ವೇಳೆ ಹಣ ದುರ್ಬಳಕೆಯಾಗಿರುವುದು ಕಂಡುಬಂದ್ದರೆ, ಬಿಡುಗಡೆಯಾಗಿರುವ ಹಣವನ್ನು ಮತ್ತೆ  ವಾಪಾಸ್ ಪಡೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!