ರಾಜ್ಯ

ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳ ನೀಡಲು ಸರ್ಕಾರ ಚಿಂತನೆ

Manjula VN
ಬೆಂಗಳೂರು: ಹೆಚ್ಚುತ್ತಿರುವ ಮಾಲಿನ್ಯ ತಡೆಯಲು ಮುಂದಾಗಿರುವ ಸರ್ಕಾರ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ಚಿಂತನೆ ನಡೆಸುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳ ನೀಡುವಿಕೆ ಕುರಿತಂತೆ ನಿನ್ನೆಯಷ್ಟೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಸಭೆ ನಡೆಸಿದ್ದು, ಸಭೆಯಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳ ನೀಡುವಿಕೆ ಕುರಿತಂತೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 
ಮಾಲಿನ್ಯವನ್ನು ಗಮನದಲ್ಲಿಟ್ಟುಕೊಕಂಡು ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳಿಗೆ ಬದಲಾಗಿ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿ ವಿಜಯ ಭಾಸ್ಕರ್ ಅವರು ತಿಳಿಸಿದ್ದಾರೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ, ಎಲೆಕ್ಟ್ರಿಕ್ ವಾಹನಗಳಿಂದ ಎದುರಾಗುವ ಸಾಧಕ ಹಾಗೂ ಬಾಧಕಗಳ ಕುರಿತಂತೆ ಅಧ್ಯಯನ ನಡೆಸುವಂತೆಯೂ ಸರ್ಕಾರ ಸೂಚಿಸಿದೆ. ಇದಲ್ಲದೆ ಸರ್ಕಾರಿ ಇಲಾಖೆಗಳಲ್ಲಿ ವಾಹನಗಳ ಹೊರಗುತ್ತಿಗೆ ಸೇವೆಗಳನ್ನೂ ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಹೊರಗುತ್ತಿಗೆ ವಾಹನಗಳ ಬದಲಾಗಿ ನಗರದಲ್ಲೇ ಇರುವ ಖಾಸಗಿ ಕ್ಯಾಬ್ ಸೇವೆಗಳನ್ನು ಬಳಕೆ ಮಾಡುವಂತೆ ತಿಳಿಸಿದೆ. ಇದರಿಂದ ಇಲಾಖೆಗೆ ಎದುರಾಗುತ್ತಿರುವ ಹೆಚ್ಚುವರಿ ಹೊರೆ ಕಡಿಮೆಯಾಗಲಿದೆ ಎಂದು ತಿಳಿಸಿದೆ ಎಂದು ಹೇಳಿದ್ದಾರೆ. 
SCROLL FOR NEXT