ಮಲಮಹದೇಶ್ವರ ಬೆಟ್ಟದಲ್ಲಿ ರಸ್ತೆ ಬದಿ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದ ಸಿಎಂ ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ತಿರುಪತಿ ಮಾದರಿಯಲ್ಲಿ ಮಲಮಹದೇಶ್ವರ ಬೆಟ್ಟದ ಅಭಿವೃದ್ಧಿ: ಹೆಚ್ ಡಿ ಕುಮಾರಸ್ವಾಮಿ

ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ತಿರುಪತಿ ಮಾದರಿಯಲ್ಲಿ ಚಾಮರಾಜ ನಗರ ಜಿಲ್ಲೆಯ ಮಲೆ ...

ಮೈಸೂರು: ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ತಿರುಪತಿ ಮಾದರಿಯಲ್ಲಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಸುತ್ತೂರು ಮಠ ನಿರ್ಮಿಸಿರುವ 69 ಕೊಠಡಿ ನಿಲಯದ ಸಂಕೀರ್ಣವನ್ನು ನಿನ್ನೆ ಉದ್ಘಾಟನೆಗೊಳಿಸಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಈ ವಿಷಯ ತಿಳಿಸಿದರು,

16 ಕಿಲೋ ಮೀಟರ್ ಉದ್ದದ ತಲಬೆಟ್ಟದಿಂದ ಎಂಎಂ ಬೆಟ್ಟದವರೆಗೆ ನೆಲಹಾಸುಗಳ ಕಾಮಗಾರಿ ಇನ್ನು 10 ದಿನಗಳಲ್ಲಿ ಆರಂಭವಾಗಲಿದೆ. ಅಲ್ಲದೆ 100 ಅಡಿ ಎತ್ತರದ ಮಹದೇಶ್ವರ ಮೂರ್ತಿ ನಿರ್ಮಾಣಕ್ಕೆ ಭೂಮಿ ಒದಗಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅರಣ್ಯ ಇಲಾಖೆಯ ಆಕ್ಷೇಪದಿಂದಾಗಿ ವಿದ್ಯುತ್ ಕೇಂದ್ರವನ್ನು ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ನರೇಂದ್ರ ಹೇಳಿದಾಗ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ತಿಳಿಸಿದರು,

ಮಲಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಮತ್ತು ಡೈರಿ ಹಾಗೂ ಇತರ ಘಟಕಗಳ ಉದ್ಘಾಟನೆಗೆ ಸದ್ಯದಲ್ಲಿಯೇ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡುವುದಾಗಿ ಕೂಡ ಕುಮಾರಸ್ವಾಮಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!