ಹಾಸನ: 1865 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ನಿತಿನ್ ಗಡ್ಕರಿ ಚಾಲನೆ
ನಿಗದಿತ ಅವಧಿಯಲ್ಲಿ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಹಾಸನ: ನಿಗದಿತ ಅವಧಿಯಲ್ಲಿ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಹಾಸನದಲ್ಲಿ 1.865 ಕೋಟಿ ವೆಚ್ಚದ ಹೆದ್ದಾರಿ ಕಾಮಗಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ದೇಶದ ವಿವಿಧ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 2 ಲಕ್ಷ ಕೋಟಿ ರೂಪಾಯಿ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಇದಲ್ಲದೇ, ಪ್ರತಿದಿನಕ್ಕೆ 28. ಕಿಮೀ ಹೆದ್ದಾರಿ ನಿರ್ಮಾಣ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ಇದು ಮುಂದಿನ ಆರು ತಿಂಗಳಲ್ಲಿ ದಿನಕ್ಕೆ 40 ಕಿ. ಮೀಗೆ ತಲುಪುವ ಸಾಧ್ಯತೆ ಇದೆ ಎಂದು ಹೇಳಿದರು.
ತೈಲ ದರ ಹೆಚ್ಚಳ ಹಿನ್ನೆಲೆಯಲ್ಲಿ ಜೈವಿಕ ಇಂಧನ ಬಳಕೆಯನ್ನು ಪ್ರೋತ್ಸಾಹಿಸಬೇಕಾದ ಅಗತ್ಯತೆ ಹೆಚ್ಚಾಗಿದೆ. ಜೈವಿಕ ಇಂಧನ ಬಳಕೆಯಿಂದ ಕರ್ನಾಟಕ ಕೃಷಿಗೆ ಸಂಬಂಧಿಸಿದ ಬಹಳಷ್ಟು ಸಮಸ್ಯೆಗಳನ್ನು ನಿವಾರಿಸಬಹುದಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.