ಕುಟುಂಬಸ್ಥರ ರೋಧನ, ಅಪಘಾತದ ಚಿತ್ರ 
ರಾಜ್ಯ

ಬೆಂಗಳೂರು: ದೇವನಹಳ್ಳಿ ಬಳಿ ಓಮ್ನಿ ಕಾರಿಗೆ ಇನ್ನೋವಾ ಡಿಕ್ಕಿ, ನಾಲ್ವರು ಯುವಕರ ಸಾವು , 9 ಮಂದಿಗೆ ಗಾಯ

ಅತಿ ವೇಗದಲ್ಲಿದ್ದ ಇನ್ನೋವಾ ಕಾರು ಮುಂದೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿದ ಪರಿಣಾಮ ನಾಲ್ವರು ಯುವಕರು ಮೃತಪಟ್ಟು,...

ಬೆಂಗಳೂರು: ಅತಿ ವೇಗದಲ್ಲಿದ್ದ ಇನ್ನೋವಾ ಕಾರು ಮುಂದೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿದ ಪರಿಣಾಮ ನಾಲ್ವರು ಯುವಕರು ಮೃತಪಟ್ಟು, ಮತ್ತಿತರ 9 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು - ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯ ಕನ್ನಮಂಗಲ ಗೇಟ್ ನಲ್ಲಿ ನಡೆದಿದೆ.

ಮೃತರನ್ನು  ಭುವನೇಶ್ವರಿ ನಗರದ ಸತೀಶ್ (22 )  ಚೊಳ್ಳನಾಯಕನಹಳ್ಳಿಯ  ಸುಂದರ್ (23)  ಮತ್ತಿಕೇರೆಯ ವಿಕಾಸ್ (23)  ಮತ್ತು ದೇವನಹಳ್ಳಿ ವೆಂಕಟೇಶ್ (25 ) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಅಜಿತ್ , ಭರತ್, ಹೇಮಂತ್, ರವಿ ಮತ್ತಿತರ 9 ಮಂದಿ  ತೀವ್ರವಾಗಿ ಗಾಯಗೊಂಡಿದ್ದು, ಪ್ರಾಣಪಾಯದಿಂದ ಪಾರು ಆಗಿದ್ದಾರೆ.

ಹೂವಿನ ಅಲಂಕಾರ ಮಾಡುತ್ತಿದ್ದ ಈ  ಒಂಬತ್ತು ಮಂದಿ ಮೊನ್ನೆ ರಾತ್ರಿ ಕನ್ನಮಂಗಲ ಗೇಟ್ ಬಳಿ  ಅತಿ ವೇಗದಲ್ಲಿದ್ದ ಇನ್ನೋವಾ ಕಾರು ಓಮ್ನಿ ಕಾರಿಗೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತಿಬ್ಬರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಅಜಿತ್ ಎಂಬವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರೆಲ್ಲರೂ ನಂದಿ ಬೆಟ್ಟಕ್ಕೆ ಹೋಗಿರುವ ಅನುಮಾನವಿದೆ. ಪ್ರತ್ಯೇಕ್ಷದರ್ಶಿಗಳ ಪ್ರಕಾರ ಇನ್ನೋವಾ ಕಾರು ಗಂಟೆಗೆ 140-150 ಕಿ. ಮೀ. ವೇಗದಲ್ಲಿ ಚಲಾಯಿಸಲಾಗುತ್ತಿತ್ತು ಎನ್ನಲಾಗುತ್ತಿದೆ. ಇನ್ನೋವಾ  ಕಾರು  ವೇಗ ನಿಯಂತ್ರಿಸಲಾಗದೆ ಅದರ ಚಾಲಕ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೃತ ಸತೀಶ್ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ತಿರುಪತಿಯಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿತ್ತು. ನಂತರ ಆತ ತನ್ನ ಸ್ನೇಹಿತರೊಂದಿಗೆ ಹೂವಿನ ಅಲಂಕಾರ ಮಾಡುವ ಉದ್ಯೋಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಮಂಗಳವಾರ ರಾತ್ರಿ 10-30ಕ್ಕೆ ಬೇಗ ಬರುವುದಾಗಿ ಹೇಳಿ ಹೋಗಿದ್ದ. ಆದರೆ, ಮುಂಜಾನೆ 5 ಗಂಟೆ ಸಮಯದಲ್ಲಿ ಪೊಲೀಸರು ಕರೆ ಮಾಡಿ ಅಪಘಾತದ ವಿಷಯ ತಿಳಿಸಿರುವುದಾಗಿ ಸತೀಶ್ ಸಹೋದರಿ ಮೀನಾ ಹೇಳಿದ್ದಾರೆ. ಸುಂದರ್ ಮನೆಯಲ್ಲಿಯೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ