ಐಐಎಸ್ ಸಿಯಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರು ಪ್ರೊಫೆಸರ್ ಗಳ ವಿರುದ್ಧ ಎಫ್ಐಆರ್
ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ ಸಿ)ಯ ಪ್ರಯೋಗಾಲಯದಲ್ಲಿನ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರೊಫೆಸರ್ ಗಳ ವಿರುದ್ಧ ಸದಾಶಿವನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ ಸಿ)ಯ ಪ್ರಯೋಗಾಲಯದಲ್ಲಿನ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರೊಫೆಸರ್ ಗಳ ವಿರುದ್ಧ ಸದಾಶಿವನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಘಟನೆಗೆ ಪ್ರೊಫೆಸರ್ ಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಪ್ರೊ. ಜಿ ಜಗದೀಶ್ ಮತ್ತು ಪ್ರೊ. ಕೆ ಪಿ ಜೆ ರೆಡ್ಡಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಐಐಎಸ್ ಸಿ ಭದ್ರತಾ ಮುಖ್ಯಸ್ಥ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಇಬ್ಬರು ಪ್ರಾಧ್ಯಾಪಕರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಕಳೆದ ಬುಧವಾರ ಹೈಡ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಏರೋಸ್ಪೇಸ್ ವಿಭಾಗದ 32 ವರ್ಷದ ಸಂಶೋಧನಾ ವಿದ್ಯಾರ್ಥಿ ಮನೋಜ್ ಕುಮಾರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಅಲ್ಲದೆ ಮೂವರು ಸಂಶೋಧನಾ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.