ರವಿ ಚವ್ಹಾಣ 
ರಾಜ್ಯ

ಗಜೇಂದ್ರಗಢ: ಬೈಕ್ ಅಪಘಾತ, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಯುವಕ ಸಾವು

ಬೈಕ್ ಅಪಘಾತವಾಗಿ ಗಾಯಗೊಂಡಿದ್ದ ಯುವಕನೊಬ್ಬ ಸಕಾಲಕ್ಕೆ ಚಿಕಿತ್ಸೆ ದೊರೆಯದ ಕಾರಣ ಮೃತಪಟ್ಟಿರುವ ದಾರುಣ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಗಜೇಂದ್ರಗಢ: ಬೈಕ್ ಅಪಘಾತವಾಗಿ ಗಾಯಗೊಂಡಿದ್ದ ಯುವಕನೊಬ್ಬ ಸಕಾಲಕ್ಕೆ ಚಿಕಿತ್ಸೆ ದೊರೆಯದ ಕಾರಣ ಮೃತಪಟ್ಟಿರುವ ದಾರುಣ ಘಟನೆ ಗದಗ ಜಿಲ್ಲೆ ಗಜೇಂದ್ರಗಢ ಪಟ್ಟಣದಲ್ಲಿ ನಡೆದಿದೆ.
ರವಿ ಚವ್ಹಾಣ (26) ಎನ್ನುವ ಯುವಕ ಸಾವನ್ನಪ್ಪಿದ್ದ ದುರ್ದೈವಿ.ಈತ ಬೈಕ್ ಅಪಘಾತದಿಂದ ಗಾಯಗೊಂಡು ನಡುರಸ್ತೆಯಲ್ಲೇ ಒದ್ದಾಡುತ್ತಿದ್ದರೂ ಯಾರೊಬ್ಬರೂ ಸಹಾಯಕ್ಕೆ ಬರದೇ ಇದ್ದದ್ದಲ್ಲದೆ ವೀಡಿಯೋ ಚಿತ್ರಿಸಿಕೊಳ್ಳುವುದರಲ್ಲೇ ತಲ್ಲೀನರಾಗಿದ್ದರು ಎನ್ನಲಾಗಿದೆ.
ಜನರು ಸಹಾಯಕ್ಕೆ ಬರುವಿದಿರಲಿ ಸಮೀಪದಲ್ಲೇ ಇದ್ದ ಪೋಲೀಸರು ಸಹ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸದೆ ಸುಮ್ಮನೆ ಇದ್ದು ತಮ್ಮ ಕರ್ತವ್ಯ ಪ್ರಜ್ಞೆ ಮರೆತಂತೆ ಇದ್ದದ್ದು ನಿಜಕ್ಕೂ ಖೇದಕರ ಸಂಗತಿ.
ಇನ್ನೂ ಆ ಯುವಕನ ದುರದೃಷ್ಟಕ್ಕೆ ಪಕ್ಕದಲ್ಲೇ ಆಸ್ಪತ್ರೆ ಇದ್ದರೂ ಸಹ ಸಕಾಲಕ್ಕೆ ಅಂಬ್ಯುಲೆನ್ಸ್ ದೊರಕದೆ ಆಸ್ಪತ್ರೆಗೆ ದಾಖಲಿಸುವುದು ವಿಳಂಬವಾಗಿದೆ. ಕಡೆಗೂ ಕ್ರೂಸರ್ ವಾಹನ ಮೂಲಕ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದಾಗ ಅಲ್ಲಿ ಆತನ ಸ್ಥಿತಿ ಚಿಂತಾಜನಕವಾಗಿರುವುದು ಕಂಡ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ  ಹುಬ್ಬಳ್ಳಿ ಕಿಮ್ಸ್ ಗೆ ಕಳಿಸಿದ್ದಾರೆ. ಆದರೆ ಹುಬ್ಬಳ್ಳಿಗೆ ತೆರಳುವ ಮಾರ್ಗ ಮಧ್ಯೆಯೇ ಯುವಕ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಒಟ್ಟಾರೆ ಅಪಘಾತ ನಡೆದು ಗಂಟೆ ಗಟ್ಟಲೆ ರಸ್ತೆ ಮಧ್ಯೆ ಯುವಕನೊಬ್ಬ ನರಳುತ್ತಿದ್ದರೂ ಯಾರೊಬ್ಬರೂ ಸಹಕಾರ ನೀಡದಿರುವುದು ಜನರಲ್ಲಿನ ಮಾನವೀಯತೆಯನ್ನೇ ಪ್ರಶ್ನಿಸುವಂತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT