ಬೆಂಗಳೂರಿನಿಂದ ಕಣ್ಣೂರಿಗೆ ವಾರಕ್ಕೆ 6 ವಿಮಾನಗಳ ಹಾರಾಟ
ನೂತನವಾಗಿ ನಿರ್ಮಾಣಗೊಂಡಿರುವ ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಗೊಂಡಿದ್ದು, ಬೆಂಗಳೂರಿನಿಂದ ಕಣ್ಣೂರಿಗೆ ವಾರಕ್ಕೆ ಒಟ್ಟು 6 ವಿಮಾನಗಳು ಹಾರಾಟ ನಡೆಸಲಿವೆ...
ಬೆಂಗಳೂರು: ನೂತನವಾಗಿ ನಿರ್ಮಾಣಗೊಂಡಿರುವ ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಗೊಂಡಿದ್ದು, ಬೆಂಗಳೂರಿನಿಂದ ಕಣ್ಣೂರಿಗೆ ವಾರಕ್ಕೆ ಒಟ್ಟು 6 ವಿಮಾನಗಳು ಹಾರಾಟ ನಡೆಸಲಿವೆ.
ಡಿ.9 ರಿಂದ ಬೆಂಗಳೂರಿನಿಂದ ಕಣ್ಣೂರಿಗೆ ವಿಮಾನಗಳು ಹಾರಾಟ ಆರಂಭಿಸಲಿದ್ದು, ವಿಮಾನದಲ್ಲಿ ಬೆಂಗಳೂರಿನಿಂದ ಕಣ್ಣೂರಿಗೆ 80 ನಿಮಿಷಗಳಲ್ಲಿ ತಲುಪಬಹುದಾಗಿದೆ. ಜಿ8 624 ವಿಮಾನವು ಕಣ್ಣೂರು ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ಹೊರಡಲಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2.20ಕ್ಕೆ ಬಂದು ತಲುಪಲಿದೆ.
ಜಿ8 625 ವಿಮಾನವು ಮಧ್ಯಾಹ್ನ 2.50ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿದ್ದು, 4.10ಕ್ಕೆ ಕಣ್ಣೂರು ತಲುಪಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.