ಸಂಗ್ರಹ ಚಿತ್ರ 
ರಾಜ್ಯ

ಎಸ್'ಸಿ/ಎಸ್'ಟಿ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣ: ಪ್ರಭುದ್ಧ ಯೋಜನೆಗೆ ಡಿಸಿಎಂ ಚಾಲನೆ

ಉನ್ನತ ಶಿಕ್ಷಣಕ್ಕಾಗಿ ವಿದೇಶದಲ್ಲಿನ ವಿಶ್ವವಿದ್ಯಾಲಯಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಪ್ರಬುದ್ಧ ಯೋಜನೆಗೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಶುಕ್ರವಾರ ಚಾಲನೆ ನೀಡಿದರು...

ಬೆಂಗಳೂರು: ಉನ್ನತ ಶಿಕ್ಷಣಕ್ಕಾಗಿ ವಿದೇಶದಲ್ಲಿನ ವಿಶ್ವವಿದ್ಯಾಲಯಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಪ್ರಬುದ್ಧ ಯೋಜನೆಗೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಶುಕ್ರವಾರ ಚಾಲನೆ ನೀಡಿದರು. 
ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿರುವ ಅವರು, ಕೆಲವು ಪ್ರತಿಭಾವಂತ ದಲಿತ ಮಕ್ಕಳು ಆರ್ಥಿಕ ಹಾಗೂ ಇನ್ನಿತರ ಕಾರಣಗಳಿಗಾಗಿ ಉನ್ನತ ಶಿಕ್ಷಣ ಪಡೆಯಲು ಆಗುವುದಿಲ್ಲ. ಅಂತಹ ಮಕ್ಕಳಿಗಾಗಿ ವಿದೇಶದಲ್ಲಿ ವ್ಯಾಸಾಂಗ ಮಾಡಲು ನೂತನ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೈರ್ಯ, ಪ್ರಪಂಚ ಜ್ಞಾನ ಇನ್ನಷ್ಟು ಹೆಚ್ಚಾಗುತ್ತದೆ. ನಾನೂ ಕೂಡ ವಿದ್ಯಾರ್ಥಿ ವೇತನ ಪಡೆದುಕೊಂಡು ವಿದೇಶದಲ್ಲಿ ವ್ಯಾಸಾಂಗ ಮಾಡಿದ್ದೆ ಎಂದು ತಿಳಿಸಿದರು. 
ನಮ್ಮಲ್ಲಿ ಶೇ.78ರಷ್ಟು ಸಾಕ್ಷರತಾ ಪ್ರಮಾಣ ಬೆಂಳೆದಿದೆಂದ. ಪರಿಶಿಷ್ಟ ಸಮುದಾಯದಲ್ಲಿ ಈ ಪ್ರಮಾಣ ಇನ್ನೂ ಶೇ.40ರ ಆಸುಪಾಸಿನಲ್ಲಿದೆ. ಇವರನ್ನು ಶೈಕ್ಷಣಿಕವಾಗಿ ಮುಂದೆ ತರುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಈ ಯೋಜನೆ ಜಾರಿಗೆ ತಂದಿದೆ ಎಂದು ತಿಳಿಸಿದರು. 
ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಈ ಹಿಂದೆ ಸ್ನಾತಕೋತ್ತರ ವ್ಯಾಸಾಂಗಕ್ಕೆ ಮಾತ್ರ ಇದ್ದ ಆರ್ಥಿಕ ನೆರವನ್ನು ಸ್ನಾತಕಪೂರ್ವ ವ್ಯಾಸಾಂಗಕ್ಕೂ ಈ ಯೋಜನೆಯಲ್ಲಿ ಕಲ್ಪಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿದೇಶಗಳಲ್ಲಿ ಉನ್ನತ ವ್ಯಾಸಾಂಗ ಮಾಡುವ ಅವಕಾಶ ಸಿಗಲಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT