ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಮೊಗ್ಗ ಅರಣ್ಯಾಧಿಕಾರಿಯಿಂದ ಒತ್ತುವರಿ ತೆರವು: ರಾಜಕೀಯ ಒತ್ತಡಕ್ಕೆ ಮಣಿದು ವರ್ಗಾವಣೆ?

ಸುಪ್ರೀಂಕೋರ್ಟ್ ಆದೇಶದ ಅನ್ವಯ ಮರಸೂರು ಮೀಸಲು ಅರಣ್ಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗಿಳಿದಿದ್ದ ವಲಯ ಅರಣ್ಯ ಅಧಿಕಾರಿಯನ್ನು ರಾಜಕೀಯ ...

ಶಿವಮೊಗ್ಗ: ಸುಪ್ರೀಂಕೋರ್ಟ್ ಆದೇಶದ ಅನ್ವಯ ಮರಸೂರು ಮೀಸಲು ಅರಣ್ಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗಿಳಿದಿದ್ದ ವಲಯ ಅರಣ್ಯ ಅಧಿಕಾರಿಯನ್ನು ರಾಜಕೀಯ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಲಾಗಿದೆ,
ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡ 21 ದಿನಗಳಲ್ಲೇ ವಲಯ ಅರಣ್ಯಾಧಿಕಾರಿ ಜಿ, ಹನುಮಂತಯ್ಯ ಅವರನ್ನು ಚಿಕ್ಕಮಗಳೂರಿನ ಮುತ್ತೋಡಿ ಅರಣ್ಯಕ್ಕೆ ವರ್ಗಾವಣೆ ಮಾಡಲಾಗಿದೆ.
ಅರಣ್ಯ ಇಲಾಖೆಯ ಪ್ರಧಾನ ಸಂರಕ್ಷಕ ಅಧಿಕಾರಿ ವರ್ಗಾವಣೆ ಆದೇಶ ಹೊರಡಿಸಿದ್ದಾರೆ, ರಾಜಕೀಯ ಒತ್ತಡಕ್ಕೆ ಮಣಿದು ಹನುಮಂತಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಮತ್ತೊಬ್ಬ ಅರಣ್ಯಾಧಿಕಾರಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿ ಮೊಸರೂರು ಗ್ರಾಮದ ಸರ್ವೆ ನಂಬರ್ 90,94 ರ ಮೀಸಲು ಅರಣ್ಯ ಪ್ರದೇಶದಲ್ಲಿನ ಒತ್ತುವರಿ ತೆರವು ನ, 15 ರಂದು ಕಾರ್ಯಾಚರಣೆಗೆ ತೆರಳಿದ್ದಾಗ 200ಕ್ಕೂ ಹೆಚ್ಚು ಜನರು ದಾರಿಗೆ ಅಡ್ಡ ಮಲಗಿ ಪ್ರತಿಭಟನೆ ನಡೆಸಿದ್ದರು, ಮಧ್ಯ ಪ್ರವೇಶಿಸಿದ ತಹಶೀಲ್ದಾರ್ ಅವರು ಜಂಟಿ ಸರ್ವೆಯ ನಂತರ ಕಾರ್ಯಾಚರಣೆ ನಡೆಸುವಂತೆ ಸೂಚಿಸಿದ್ದರು,. 
ಕಾರ್ಯಾಚರಣೆಗೆ ತೆರಳಿದ್ದ ವೇಳೆ ಯಾವುದೇ ಸಂಘರ್ಷ ,ಸಾವು ನೋವು ಸಂಭವಿಸಿರಲಿಲ್ಲ, ಅರಸಾಳು ಕಚೇರಿಗೆ ಹೋದ ನಂತರ ಶಾಸಕ ಹಾಲಪ್ಪ ನೇತೃತ್ವದಲ್ಲಿ ಟಿಲ್ಲರ್ ನಲ್ಲಿ ರೈತರೊಬ್ಬರ ಮೃತದೇಹ ಇಟ್ಟುಕೊಂಡು, ಅಲ್ಲಿಗೆ ಬಂದ ಹಲವು ಜನಪ್ರತಿನಿಧಿಗಳು ಸಾರ್ವಜನಿಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ, ಸೂಕ್ತ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ಹನುಮಂತಯ್ಯ ಮನವಿ ಮಾಡಿದ್ದಾರೆ.
ಘಟನೆ ನಡೆದ ದಿನ ಮೊಸರೂರಿನ ರೈತ ಲಕ್ಷ್ಮಣಪ್ಪ ತಮ್ಮ ಮನೆಯಲ್ಲಿ ಮೃತಪಟ್ಟಿದ್ದರು, ನಂತರ ಅವರ ಮೃತದೇಹವನ್ನು ಅರಸಾಳು ಅರಣ್ಯಾಧಿಕಾರಿ ಕಚೇರಿಗೆ ತಂದು ಧರಣಿ ನಡೆಸಲಾಗಿತ್ತು, ಸಂಸದರು ಶಾಸಕರ ಒತ್ತಡಕ್ಕೆ ಮಣಿದು ಪೊಲಿಸರು ಹನುಮಂತಯ್ಯ ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.
ಆದರೆ ಹನುಮಂತಯ್ಯ ಅವರ ವರ್ಗಾವಣೆಗೆ ರೈತನ ಸಾವು ಕಾರಣವಲ್ಲ, ಹನುಮತಯ್ಯ ಒತ್ತುವರಿದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದರು, ಹೀಗಾಗಿ  ಅಧಿಕಾರಿಯ ವರ್ಗಾವಣೆ ಹಿಂದೆ ರಾಜಕಾರಣಿಗಳ ಕೈವಾಡವಿದೆ ಎಂದು ಬೇರೆ ಅರಣ್ಯಾಧಿಕಾರಿಗಳು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT