ಸಂಗ್ರಹ ಚಿತ್ರ 
ರಾಜ್ಯ

ಇಂದಿನಿಂದ 10 ದಿನ ಚಳಿಗಾಲ ಅಧಿವೇಶನ: ಮೈತ್ರಿ ಸರ್ಕಾರಕ್ಕೆ ಅಗ್ನಿಪರೀಕ್ಷೆ

ಬೆಳಗಾವಿಯ ಸುವರ್ಣ ಸೌಧದಲ್ಲಿ ಸೋಮವಾರದಿಂದ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಅತಂತ್ರದ ಸವಾಲನ್ನು ಎದುರಿಸುತ್ತಲೇ ಇರುವ ಮುಖ್ಯಮಂತ್ರಿ...

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸೋಮವಾರದಿಂದ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಅತಂತ್ರದ ಸವಾಲನ್ನು ಎದುರಿಸುತ್ತಲೇ ಇರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಈ ವಿಧಾನಮಂಡಲ ಅಧಿವೇಶ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ. 
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಈಗಾಗಲೇ ಬಿಜೆಪಿ ಸಕಲ ಸಿದ್ಧತೆಗಳನ್ನು ನಡೆಸಿದ್ದು,  ಸಾಲ ಮನ್ನಾ, ಬರ ಪರಿಹಾರ, ಕಬ್ಬಿನ ಬಾಕಿ, ರೈತರ ವಿವಿಧ ಸಮಸ್ಯೆ ಮುಂತಾದ ಅಂಶಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧವಾಗಿದೆ. 
ಕುಮಾರಸ್ವಾಮಿಯವರು ಅಧಿಕಾರಕ್ಕೆ ಬಂದ ಬಳಿಕ ಆರು ತಿಂಗಳುಗಳಲ್ಲಿ 3 ಅಧಿವೇಶನಗಳುನ್ನು ಎದುರಿಸಿದ್ದು, ಆರಂಭದ ಅಧಿವೇಶನಗಳಲ್ಲಿ ಸರ್ಕಾರದ ಸಾಧನೆಗೆ ಸಮಯಬೇಕೆಂದು ಸಬೂಬು ಹೇಳುತ್ತಿದ್ದರು. ಇದರಿಂದ ಪ್ರತಿಪಕ್ಷಗಳನ್ನು ಕಟ್ಟು ಹಾಕುವಂತೆ ಮಾಡಲಾಗಿತ್ತು. ಆದರೆ, ಈ ಬಾರಿ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳಲು ಇದೀಗ ಪ್ರತಿಪಕ್ಷಗಳು ಸಿದ್ಧವಾಗಿ ನಿಂತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ