ಶಿವಕುಮಾರ ಸ್ವಾಮೀಜಿ 
ರಾಜ್ಯ

ಸಿದ್ದಗಂಗಾ ಶ್ರೀ ಚೇತರಿಕೆ: ವಾರದಲ್ಲಿ ಡಿಸ್ಚಾರ್ಜ್ ಸಾಧ್ಯತೆ

ಯಕೃತ್ತು ಮತ್ತು ಪಿತ್ತನಾಳದ ಸಮಸ್ಯೆಯಿಂದಾಗಿ ಚೆನ್ನೈನ ರೆಲಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡು ಬಂದಿದ್ದು, ಮಂಗಳವಾರ...

ತುಮಕೂರು: ಯಕೃತ್ತು ಮತ್ತು ಪಿತ್ತನಾಳದ ಸಮಸ್ಯೆಯಿಂದಾಗಿ ಚೆನ್ನೈನ ರೆಲಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡು ಬಂದಿದ್ದು, ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಿಗ್ಗೆ ಐಸಿಯುವಿನಿಂದ ವಾರ್ಡ್'ಗೆ ಶಿಫ್ಟ್ ಮಾಡುವ ಸಾಧ್ಯತೆಗಳಿವೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಬೈಪಾಸ್ ಮಾದರಿಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಶ್ರೀಗಳಿಗೆ ಈವರೆಗೆ ಗ್ಲೂಕೋಸ್ ನೀಡಲಾಗಿತ್ತು. ಆದರೆ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಅವರಿಗೆ ದ್ರವರೂಪದ ಆಹಾರ ನೀಡಲಾಗುತ್ತಿದೆ. ಇಷ್ಟಲಿಂಗ ಪೂಜೆ ಮಾಡಬೇಕೆಂದು ಶ್ರೀಗಳು ಹೇಳುತ್ತಿರುವುದರಿಂದ ವಾರ್ಡ್'ಗೆ ಶಿಫ್ಟ್ ಆದ ಮೇಲೆ ಅವಕಾಶ ಕಲ್ಪಿಸಲು ವೈದ್ಯರು ಸಮ್ಮತಿಸಿದ್ದಾರೆ. 
ಶ್ರೀಗಳ ಆರೋಗ್ಯವನ್ನು ಮತ್ತೊಮ್ಮೆ ತಪಾಸಣೆ ಮಾಡಿ ಮುಂದಿನ ವಾರದೊಳಗೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಕರೆದುಕೊಂಡು ಬರಲಾಗುತ್ತದೆ ಎಂದು ಮಠದ ಕಿರಿಯ ಸ್ವಾಮೀಜಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT