ಪಂಪ್'ಸೆಟ್'ಗೆ 10 ಗಂಟೆಗಳ 3 ಫೇಸ್ ವಿದ್ಯುತ್: ಸಿಎಂ ಕುಮಾರಸ್ವಾಮಿ
ರಾಜ್ಯದಲ್ಲಿ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಇರುವುದರಿಂದ ನೀರಾವರಿ ಪಂಪ್ ಸೆಟ್ ಗಳಿಗೆ 10 ತಾಸುಗಳ 3 ಫೇಸ್ ವಿದ್ಯುತ್ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಇಂಧನ ಖಾತೆಯ ಹೊಣೆಯನ್ನೂ ಹೊತ್ತಿರುವ...
ಬೆಂಗಳೂರು: ರಾಜ್ಯದಲ್ಲಿ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಇರುವುದರಿಂದ ನೀರಾವರಿ ಪಂಪ್ ಸೆಟ್ ಗಳಿಗೆ 10 ತಾಸುಗಳ 3 ಫೇಸ್ ವಿದ್ಯುತ್ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಇಂಧನ ಖಾತೆಯ ಹೊಣೆಯನ್ನೂ ಹೊತ್ತಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಭರವಸೆ ನೀಡಿದ್ದಾರೆ.
ವಿಧಾನಮಂಡಲ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಎಂ.ಎಸ್. ಸೋಮಲಿಂಗಪ್ಪ ಅವರ ಪ್ರಶ್ನೆಗೆ ಉತ್ತರ ನೀಡುವ ವೇಲೆ ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಅವರ ಸಲಹೆಯನ್ನು ಪರಿಗಣಿಸಿದ ಕುಮಾರಸ್ವಾಮಿಯವರು ಈ ಭರವಸೆಯನ್ನು ನೀಡಿದ್ದಾರೆ.
ರಾಜ್ಯದ್ಯಂತ ಈಗಾಗಲೇ ಕೊಪ್ಪಳ, ರಾಯಚೂರು ಜಿಲ್ಲೆಯಲ್ಲಿ 10-11 ಗಂಟೆ ಕಾಲ 3 ಫೇಸ್ ವಿದ್ಯುತ್ ಅನಧಿಕೃತವಾಗಿ ನೀಡಲಾಗುತ್ತಿದೆ .ಆದರೆ, ಹೆಚ್ಚು ವಿದ್ಯುತ್ ನೀಡುವುದರಿಂದ ಅಂತರ್ಜಲ ಖಾಲಿ ಆಗಿ ಸಮಸ್ಯೆಯಾಗುತ್ತದೆ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಇದೀಗ ವಿದ್ಯುತ್ ನೀಡಿದರೆ ರೈತರ ಬೆಳೆ ಉಳಿಸಿಕೊಳ್ಳಲು ಅನುವಾಗುತ್ತದೆ ಎಂದು ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಹೀಗಾಗಿ ರಾಜ್ಯದ್ಯಂತ 10 ಗಂಟೆಗಳ 3 ಫೇಸ್ ವಿದ್ಯುತ್ ನೀಡುವ ಬಗ್ಗೆ ಚರ್ಚಿಸಲಾಗುವುದು. ಜೊತೆಗೆ ರೈತರ ಪಂಪ್ ಸೆಟ್'ಗಳ ಸಕ್ರಮಗೊಳಿಸುವ 10 ಸಾವಿರ ಸುಲ್ಕ ಮನ್ನಾ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.