ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ 
ರಾಜ್ಯ

ಮೈಸೂರಿನ ಕೆ. ಆರ್.ಆಸ್ಪತ್ರೆಗೆ ಮುಖ್ಯಮಂತ್ರಿ ಭೇಟಿ: ಅಸ್ವಸ್ಥರ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ

, ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕೆ. ಆರ್ . ಆಸ್ಪತ್ರೆಗೆ ಭೇಟಿ ನೀಡಿ, ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ.

ಮೈಸೂರು: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸುಳವಾಡಿ ಗ್ರಾಮದಲ್ಲಿನ ಕಿಚ್ಚುಕತ್ತಿ  ಮಾರಮ್ಮ  ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿರುವ ಭಕ್ತಾಧಿಗಳು ಮೈಸೂರಿನ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಮೃತಪಟ್ಟಿರುವ ಸಂಖ್ಯೆ ಸುಮಾರು  11ಕ್ಕೆ ಏರಿಕೆ ಆಗಿದ್ದು, ಸುಮಾರು 70ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದು, ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ 40 ಅಸ್ಥಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ಮಧ್ಯೆ  ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ  ಕೆ. ಆರ್ . ಆಸ್ಪತ್ರೆಗೆ ಭೇಟಿ ನೀಡಿ, ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ.
 ಈ ಸಂದರ್ಭದಲ್ಲಿ ಮಾತನಾಡಿದ  ಮುಖ್ಯಮಂತ್ರಿ , ಮೃತಪಟ್ಟವರ ಕುಟುಂಬ ಸದಸ್ಯರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು,ಅಸ್ವಸ್ಥರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ  ಹೇಳಿದ್ದಾರೆ.ಘಟನೆ ಬಗ್ಗೆ ತನಿಖೆಗೆ ಆದೇಶಿಸುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಅಸ್ವಸ್ಥಗೊಂಡವರ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ' ಎಂದು ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್