ಮಂಗಳೂರು: ವಿದ್ಯಾರ್ಥಿಗಳನ್ನು ಸನ್ಮಾರ್ಗದಲ್ಲಿ ನಡೆಸಬೇಕಾದ ಶಿಕ್ಷಕನೇ ವಿದ್ಯಾ ದೇಗುಲದಲ್ಲಿ ವಿದ್ಯಾರ್ಥಿಯನ್ನು ಕಾಮತೃಷೆಗೆ ಬಳಸಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರಿನ ಹೊಸ್ಮಾರು-ನಾರಾವಿ ನಡುವಿನ ಖಾಸಗಿ ವಿದ್ಯಾ ಸಂಸ್ಥೆಯೊಂದರಲ್ಲಿ ಈ ಘಟನೆ ನಡೆದಿದೆ. ಶಿಕ್ಷಕನೊರ್ವ ವಿದ್ಯಾರ್ಥಿನಿಯೊಬ್ಬಳಿಗೆ ಮಂಕುಬೂದಿ ಎರಚಿ ರೂಂವೊಂದರಲ್ಲಿ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣ ಫೇಸ್ ಬುಕ್, ವಾಟ್ಸಾಪ್ ನಲ್ಲಿ ವೈರಲ್ ಆಗುತ್ತಿದೆ.
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ಈ ಸಂಬಂಧ ಇಲ್ಲಿಯವರೆಗೂ ವಿದ್ಯಾರ್ಥಿನಿಯ ಪೋಷಕರು ದೂರು ದಾಖಲಿಸಿಲ್ಲ. ಈ ಹಿನ್ನೆಲೆಯಲ್ಲೇ ಪೊಲೀಸರೇ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಳ್ಳಲುವ ಸಾಧ್ಯತೆ ಇದೆ.
ಪೊಲೀಸ್ ಮೂಲಗಳ ಪ್ರಕಾರ ವಿದ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡಿರುವ ಶಿಕ್ಷಕ ಬೆಳ್ತಂಗಡಿಯ ಪ್ರಸಾದ್ ಎಂದು ತಿಳಿದುಬಂದಿದೆ.