ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ 
ರಾಜ್ಯ

ದೇವಸ್ಥಾನದ ಪ್ರಸಾದ ಸೇವಿಸಿ 10 ಸಾವು, ದುರದೃಷ್ಟಕರ ಘಟನೆ- ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಒಂಬತ್ತು ಭಕ್ತರು ಮೃತಪಟ್ಟಿರುವ ಪ್ರಕರಣ ದುರದೃಷ್ಟಕರ ಘಟನೆಯಾಗಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಳಗಾವಿ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ  10 ಭಕ್ತರು ಮೃತಪಟ್ಟಿರುವ ಪ್ರಕರಣ ದುರದೃಷ್ಟಕರ ಘಟನೆಯಾಗಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ  ಪ್ರಧಾನ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆ ಆಯುಕ್ತರು ಮಂಡ್ಯ ಹಾಗೂ  ಮೈಸೂರು ಜಿಲ್ಲಾ ಆರೋಗ್ಯ ಅಧೀಕ್ಷಕರಿಗೆ ಸೂಚನೆ ನೀಡಿದ್ದಾರೆ ಎಂದು ಅವರು  ತಿಳಿಸಿದರು.

ಸಂಬಂಧಿತ  ಅಧಿಕಾರಿಗಳು 108 ಸಹಾಯವಾಣಿ ಕೇಂದ್ರ ಸಂಪರ್ಕಿಸುವ ಮೂಲಕ ಆಂಬ್ಯುಲೆನ್ಸ್ ಸೇವೆಗೆ ಸಹಕಾರ ನೀಡುತ್ತಿದ್ದಾರೆ. ಖಾಸಗಿ ಆಂಬ್ಯುಲೆನ್ಸ್ ಸೇವೆ ಪಡೆಯಲು ಮೈಸೂರಿನ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ  ಆರೋಗ್ಯ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಸಮನ್ವಯತೆ ಹಾಗೂ ಮೇಲುಸ್ತುವಾರಿ ಕಾರ್ಯಕ್ಕಾಗಿ ಬೆಂಗಳೂರಿನಿಂದ ಇಬ್ಬರು ಹಿರಿಯ ಅಧಿಕಾರಿಗಳು ಆಗಮಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.  ಘಟನೆ  ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಸಿ. ಎಚ್. ಪುಟ್ಟರಾಜು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ದಕ್ಷಿಣ ಕನ್ನಡ ಜಿಲ್ಲೆಗೆ 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣದ ಪ್ರಸ್ತಾವನೆ: ಸಾರ್ವಜನಿಕರಿಂದ ಆಕ್ಷೇಪಣೆಗೆ ಆಹ್ವಾನ

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"