ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದು 
ರಾಜ್ಯ

ಚಾಮರಾಜನಗರ: ದೇವಸ್ಥಾನದ ಪ್ರಸಾದ ಸೇವಿಸಿ 9 ಸಾವು, 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಒಂಬತ್ತು ಭಕ್ತರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಒಂಬತ್ತು ಭಕ್ತರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಮೃತ ಭಕ್ತರನ್ನು ಗೋಪಿಯಮ್ಮ(35), ಶಾಂತಾ (20) ಪಾಪಣ್ಣ(35) ಹಾಗೂ ಬಾಲಕಿ ಅನಿತಾ(14) ಎಂದು ಗುರುತಿಸಲಾಗಿದ್ದು, ಅಸ್ವಸ್ಥಗೊಂಡವರನ್ನೆಲ್ಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸುಲ್ವಾಡಿಯ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಸಮಾರಂಭದಲ್ಲಿ ಈ ಅವಘಡ ಸಂಭವಿಸಿದೆ.
ಕಾರ್ಯಕ್ರಮದಲ್ಲಿ ರೈಸ್​ಬಾತ್​ ತಯಾರಿಸಲಾಗಿತ್ತು. ಅದನ್ನು ತಿಂದ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದಾರೆ. ಆದರೆ ಯಾವ ಕಾರಣಕ್ಕೆ ಅಸ್ವಸ್ಥರಾದರು ಎಂಬುದಾಗಿ ತಿಳಿದಿಲ್ಲ ಎಂದು ಕೆಲ ಭಕ್ತರು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ದೇವಾಲಯದ ಗೋಪುರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎರಡು ಬಣಗಳ ನಡುವೆ ದ್ವೇಷವಿತ್ತು. ಹೀಗಾಗಿ ಒಂದು ಬಣದವರು ಪ್ರಸಾದಕ್ಕೆ ವಿಷಪ್ರಾಶನ ಮಾಡಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪ್ರಸಾದವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜಿಲ್ಲಾಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಹನೂರು ಶಾಸಕ ನಾಗೇಂದ್ರ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ