ಸಂಗ್ರಹ ಚಿತ್ರ 
ರಾಜ್ಯ

ವಿಷ ಪ್ರಸಾದ ದುರಂತ; ಅಪೋಲೋ ಆಸ್ಪತ್ರೆಯಲ್ಲಿ ಮಹಿಳೆ ಸಾವು, ಸಾವಿನ ಸಂಖ್ಯೆ 13ಕ್ಕೆ ಏರಿಕೆ

ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ತಡರಾತ್ರಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಚಾಮರಾಜನಗರ: ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ತಡರಾತ್ರಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ವಾಡಿ ಮಾರಮ್ಮ ದೇವಿಯ ವಿಷ ಪ್ರಸಾದಕ್ಕೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇಂದು ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ದೇಗುಲದ ಆವರಣದಲ್ಲಿ ಪ್ರಸಾದ ತಿಂದು ತೀವ್ರ ಅಸ್ವಸ್ಥರಾಗಿದ್ದ ಸಾಲಮ್ಮ (35 ವರ್ಷ) ಮತ್ತು ಮಗೇಶ್ವರಿ (35) ಎಂಬ ಮಹಿಳೆಯರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ನಿನ್ನೆ ತಡರಾತ್ರಿ  ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಸಾಲಮ್ಮ ಮತ್ತು ಮೃಗೇಶ್ವರಿ ತಮ್ಮ ಸಂಬಂಧಿಕರ ಜತೆ ದೇವಸ್ಥಾನಕ್ಕೆ ತೆರಳಿ ಪ್ರಸಾದ ಸೇವಿಸಿದ್ದರು. ಆರು ತಿಂಗಳ ಹಿಂದಷ್ಟೇ ಸಾಲ್ಲಮ್ಮನ ಪತಿ ಮೃತಪಟ್ಟಿದ್ದರು. ಘೋರ ದುರಂತದಲ್ಲಿ ಈಗಾಗಲೇ ನೂರಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ 29 ಮಂದಿಯ ಸ್ಥಿತಿ ಬಹಳ ಗಂಭೀರವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದೇ ಚಾಮರಾಜನಗರದ ಬಿದರಳ್ಳಿ ಗ್ರಾಮವೊಂದರಲ್ಲೇ  ಮಂದಿ ಮೃತರಾಗಿದ್ದರು. ಮೃತರನ್ನು ಪಾಪಣ್ಣ(70 ವರ್ಷ), ಅನಿತಾ(12ವರ್ಷ), ಶಾಂತರಾಜು(25 ವರ್ಷ), ಗೋಪಿಯಮ್ಮ(40 ವರ್ಷ), ಅಣ್ಣಯಪ್ಪತಮಡಿ(45 ವರ್ಷ), ರಾಚಯ್ಯ (35 ವರ್ಷ), ಕೃಷ್ಣನಾಯಕ್(50 ವರ್ಷ), ಶಿವು(35 ವರ್ಷ), ದೊಡ್ಡ ಮಾದಯ್ಯ(42 ವರ್ಷ), ಶಕ್ತಿ ವೇಲು(45 ವರ್ಷ), ಅವಿನಾಶ್(7 ವರ್ಷ)  ಎಂದು ಗುರುತಿಸಲಾಗಿದೆ. ಮೈಸೂರಿನ ಕೆ. ಆರ್.ಆಸ್ಪತ್ರೆ, ಜೆಎಸ್‍ಎಸ್ ಹಾಗೂ ಅಪೋಲೋ ಆಸ್ಪತ್ರೆಗಳಲ್ಲೂ 40 ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅಸ್ವಸ್ಥರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಬ್ಬರು ಮಕ್ಕಳು ಸೇರಿ 13 ಮಂದಿಯನ್ನು ವೆಂಟಿಲೇಟರ್ ನಲ್ಲಿ ಇಡಲಾಗಿದೆ. ಆಸ್ಪತ್ರೆಯಲ್ಲಿ ಅಸ್ವಸ್ಥರು ಸಾವು ಬದುಕಿನ ಮಧ್ಯೆ ನರಳಾಡುತ್ತಿದ್ದಾರೆ. ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ದುರಂತ ಒಂದು ಕಡೆಯಾದರೆ ಬದುಕುಳಿದವರಿಗೆ ಚಿಕಿತ್ಸೆ ಕೊಡಿಸುವುದೇ ಸವಾಲಾಗಿ ಪರಿಣಮಿಸಿದೆ. ಕೊಳ್ಳೇಗಾಲ ತಾಲೂಕಾಸ್ಪತ್ರೆ ಕುಂದುಕೊರತೆಗಳ ಆಗರವಾಗಿದೆ. ಇಲ್ಲಿ ಯಾವುದೇ ಸೌಲಭ್ಯವಿಲ್ಲ, ಸರಿಯಾದ ಚಿಕಿತ್ಸೆ ಕೊಡುತ್ತಿಲ್ಲ ಅಂತ ಅಸ್ವಸ್ಥರ ಸಂಬಂಧಿಕರು ವೈದ್ಯರೊಂದಿಗೆ ಗಲಾಟೆ ಮಾಡಿದ್ದಾರೆ. ಬಳಿಕ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ರೋಗಿಗಳಲ್ಲಿ ಐವರನ್ನು ಶಿಫ್ಟ್ ಮಾಡಲಾಗಿದ್ದು, ಇನ್ನು 3 ಮಂದಿ ಇಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video