ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ಸಿಎಂ ಆದ ಬಳಿಕ ಕುಮಾರಸ್ವಾಮಿ ಮೊದಲ ಹುಟ್ಟುಹಬ್ಬ: ಸರಳವಾಗಿ ಆಚರಿಸಲು ನಿರ್ಧಾರ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಎಚ್ .ಡಿ ಕುಮಾರಸ್ವಾಮಿ ಇಂದು ತಮ್ಮ ಮೊದಲ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ...

ಬೆಂಗಳೂರು:  ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಎಚ್ .ಡಿ ಕುಮಾರಸ್ವಾಮಿ ಇಂದು ತಮ್ಮ ಮೊದಲ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಸಿಎಂ ತಮ್ಮ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.
ಇಂದು ಹುಟ್ಟುಹಬ್ಬದ ಕಾರಣ ಸಾರ್ವಜನಿಕರು, ಅಭಿಮಾನಿಗಳು, ಕಾರ್ಯಕರ್ತರಿಗೆ ಸಿಎಂ ಸಿಗುವುದಿಲ್ಲ. ಇಡೀ ದಿನ ಸಿಎಂ ಕುಮಾರಸ್ವಾಮಿ ತಮ್ಮ ಕುಟುಂಬ ಜೊತೆ ಇರಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಜೆಪಿ ನಗರದ ನಿವಾಸಕ್ಕೆ ಯಾರು ಬಾರದಂತೆ ಮನವಿ ಮಾಡಿದ್ದಾರೆ.
ಹಿತೈಷಿಗಳು, ಅಭಿಮಾನಿಗಳು ಬೆಳಗಾವಿ ಅಧಿವೇಶನದ ನಂತರ ಸಿಎಂರನ್ನ ಭೇಟಿ ಮಾಡಿ ಶುಭಾಶಯ ತಿಳಿಸಬಹುದಾಗಿದೆ. ಇದೇ ವೇಳೆ ಕಾರ್ಯಕರ್ತರು, ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್ ಅಳವಡಿಸದಿರುವಂತೆ ಸಿಎಂ ಮನವಿ ಮಾಡಿದ್ದಾರೆ. ಈ ಸಂಬಂಧ ಸಂದೇಶ ರವಾನೆ ಮಾಡಿರುವ ಸಿಎಂ ನಿಮ್ಮ ಶುಭ ಹಾರೈಕೆಗಳೇ ನನಗೆ ಶ್ರೀರಕ್ಷೆ, ಫ್ಲೆಕ್ಸ್ ಬ್ಯಾನರ್ ಅಳವಡಿಸಿ ಊರಿನ ಅಂದ ಹಾಳು ಮಾಡಬೇಡಿ ಎಂಬ ಸಂದೇಶ ರವಾನಿಸಿದ್ದಾರೆ.
ಇನ್ನೂ ಸೋಮವಾರ ಅದರೆ ಡಿಸೆಂಬರ್ 17 ರಂದು  ಮಧ್ಯಪ್ರದೇಶ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT