ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬಾಗಲಕೋಟೆ ಡಿಸ್ಟಿಲರಿ ಸಂಸ್ಕರಣಾ ಘಟಕದಲ್ಲಿ ಸ್ಪೋಟ: 6 ಸಾವು, ಐವರಿಗೆ ಗಾಯ

ಡಿಸ್ಟಿಲರಿ ಸಂಸ್ಕರಣಾ ಘಟಕದಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ಆರು ಮಂದಿ ಸಾವನ್ನಪ್ಪಿ ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ...

ಸಾಂದರ್ಭಿಕ ಚಿತ್ರ
Shilpa D
Updated On : 16 Dec 2018, 3:46 am
ಬಾಗಲಕೋಟೆ: ಡಿಸ್ಟಿಲರಿ ಸಂಸ್ಕರಣಾ ಘಟಕದಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ಆರು ಮಂದಿ  ಸಾವನ್ನಪ್ಪಿ ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ  ಜಿಲ್ಲೆ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಸಂಭವಿಸಿದೆ.,
ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಮುರುಗೇಶ್ ನಿರಾಣಿ ಒಡೆತನದ ಈ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಪೋಟದ ತೀವ್ರತೆಗೆ ಐದು ಕಾರ್ಮಿಕರು ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ, ಮುಧೋಳ ಪೊಲೀಸ್ ಠಾಣೆಯಲ್ಲ್ ಪ್ರಕರಣ ದಾಖಲಾಗಿದೆ.

Advertisement

Advertisement

ಸಣ್ಣ ಪ್ರಮಾಣದಲ್ಲಿ  ಸ್ಪೋಟ ಸಂಭವಿಸಿದ್ದು, ಘಟನೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕಾರ್ಖಾನೆ ಮಾಲೀಕ ಮುರುಗೇಶ್ ನಿರಾಣಿ ಹೇಳಿದ್ದಾರೆ. ಇನ್ನೂ ಘಟಕದಲ್ಲಿದ್ದ ಸೇಫ್ಟಿವಾಲ್ ಕೆಲಸ ಮಾಡದ ಕಾರಣ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments