ಬೆಂಗಳೂರು: ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಸೀತಾ ಭತೇಜಾ ಅವರು ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
ಲ್ಯುಕೇಮಿಯಾದಿಂದ ಬಳಲುತ್ತಿದ್ದ ಸೀತಾ ಭತೇಜಾ ಅವರು ನಗರದ ಸೀತಾ ಭತೇಜಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಸೀತಾ ಭತೇಜಾ ಅವರು ಸೀತಾ ಭತೇಜಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಂಸ್ಥಾಪಕಿ ಹಾಗೂ ಮಾಜಿ ವ್ಯವಸ್ಥಾಪಕ ಟ್ರಸ್ಟಿ ಆಗಿದ್ದರು. ಅವರು ಮೂವರು ಮಕ್ಕಳನ್ನು ಅಗಲಿದ್ದು, ಗುರುವಾರ ವಿಲ್ಸನ್ ಗಾರ್ಡನ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.