ಮಹಿಳೆಗೆ ಲೈಂಗಿಕ ಕಿರುಕುಳ, ಪೊಲೀಸ್ ಇನ್ಸ್ಪೆಕ್ಟರ್ ಗೆ ಸಾರ್ವಜನಿಕರಿಂದಲೇ ಧರ್ಮದೇಟು! 
ರಾಜ್ಯ

ಹಾವೇರಿ: ಮಹಿಳೆಗೆ ಲೈಂಗಿಕ ಕಿರುಕುಳ, ಪೊಲೀಸ್ ಇನ್ಸ್ ಪೆಕ್ಟರ್ ಗೆ ಸಾರ್ವಜನಿಕರಿಂದ ಧರ್ಮದೇಟು!

ಮಹಿಳೆಯರನ್ನು ಕಾಮಾಂಧರಿಂದ ರಕ್ಷಿಸಬೇಕಾದ ಪೊಲೀಸ್ ಅಧಿಕಾರಿಯೇ ಲೈಂಗಿಕ ಕಿರುಕುಳ ನೀಡಿ ಸಾರ್ವಜನಿಕರಿಂದ ಧರ್ಮದೇಟು ನೀಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ.

ಹಾವೇರಿ: ಮಹಿಳೆಯರನ್ನು ಕಾಮಾಂಧರಿಂದ ರಕ್ಷಿಸಬೇಕಾದ ಪೊಲೀಸ್ ಅಧಿಕಾರಿಯೇ ಲೈಂಗಿಕ ಕಿರುಕುಳ ನೀಡಿ ಸಾರ್ವಜನಿಕರಿಂದ ಧರ್ಮದೇಟು ನೀಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ. 
ಬ್ಯಾಡಗಿ ತಾಲೂಕು ಪಂಚಾಯ್ತಿ ಕಚೇರಿ ಎದುರು ಈ ಘಟನೆ ನಡೆದಿದ್ದು, ಸಾರ್ವಜನಿಕರು ಬ್ಯಾಡಗಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಇನ್ಸ್ ಪೆಕ್ಟರ್ ನ್ನು ಎಳೆದೊಯ್ದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.  ಮಹಿಳೆಯೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸುತ್ತಿದ್ದ ಸಂಬಂಧಿಕರ ಮೇಲೆ ದೂರು ನೀಡಲು ಪೊಲೀಸ್ ಠಾಣೆಗೆ ಮಹಿಳೆ ಆಗಮಿಸಿದ್ದರು. ಆದರೆ ದೂರು ನೀಡಲು ಬಂದಿದ್ದ ಮಹಿಳೆಯನ್ನೇ ಪೊಲೀಸ್ ಇನ್ಸ್ ಪೆಕ್ಟರ್ ಮಂಚಕ್ಕೆ ಕರೆದಿದ್ದಾನೆ.  ಇದರಿಂದ ಕೋಪಗೊಂಡ ಮಹಿಳೆ ಗ್ರಾಮಸ್ಥರೊಂದಿಗೆ ಬ್ಯಾಡಗಿಗೆ ಆಗಮಿಸಿ ಪೊಲೀಸ್ ಅಧಿಕಾರಿ ವಿರುದ್ಧವೇ ಹಿರಿಯ ಅಧಿಕಾರಿಗಳಿಗೆ ದೂರು ನೀಡಲು ಮುಂದಾಗಿದ್ದಾರೆ. ಈ ವೇಳೆ ಗ್ರಾಮಸ್ಥರು ಇನ್ಸ್ ಪೆಕ್ಟರ್ ನ ಸಮವಸ್ತ್ರ ಎಳೆದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಡಿಎಸ್ ಪಿ ಎಲ್ ಕುಮಾರಪ್ಪಾ ಗ್ರಾಮಸ್ಥರನ್ನು ಸಮಾಧಾನಪಡಿಸಿದ್ದಾರೆ. 
ಮಹಿಳೆ ನೀಡಿರುವ ದೂರು ಹಾಗೂ ಪೊಲೀಸ್ ಅಧಿಕಾರಿ ನೀಡಿರುವ ದೂರನ್ನು ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸುತ್ತಿರುವುದಾಗಿ ಹೆಚ್ಚುವರಿ ಎಸ್ ಪಿ ಜಿಎ ಜಗದೀಶ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT