ಸಂಗ್ರಹ ಚಿತ್ರ 
ರಾಜ್ಯ

ಕೋಲಾರ: ಶೌಚಾಲಯ ಗೋಡೆ ಕುಸಿದು 6ನೇ ತರಗತಿ ವಿದ್ಯಾರ್ಥಿನಿ ದುರ್ಮರಣ

ಶಾಲಾ ಶೌಚಾಲಯದ ಗೋಡೆ ಕುಸಿದು ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣ ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ: ಶಾಲಾ ಶೌಚಾಲಯದ ಗೋಡೆ ಕುಸಿದು ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣ ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಮುಳಬಾಗಿ;ಲು ಗುಣಗಂಟಿ ಪಾಳ್ಯ ಸರ್ಕಲ್‌ನಲ್ಲಿರುವ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯ ಗೊಡೆ ಕುಸಿದ ಪರಿಣಾಮ ಜೋಸ್ನಾ ಎಂಬ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ. ಬಿಸ್ನಹಳ್ಳಿ ಮೂಲದವಳಾಗಿದ್ದ ಜೋಸ್ನಾ ವಸತಿ ಶಾಲೆಯಲ್ಲಿ ಆರನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.
ಖಾಸಗಿ ಕಟ್ಟಡದಲ್ಲಿ ನಡೆಯುತ್ತಿದ್ದ ಈ ವಸತಿ ಶಾಲೆ ಕಟ್ಟಡ ಸಾಕಷ್ಟು ಗಟ್ಟಿಯಾಗಿರಲಿಲ್ಲ ಎನ್ನಲಾಗಿದೆ, ಅಲ್ಲದೆ ವಸತಿ ಶಾಲೆಗಾಗಿ ಶಾಶ್ವತ ಕಟ್ಟಡ ನಿರ್ಮಾಣವಾಗುತ್ತಿದ್ದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಖಾಸಗಿ ಕಟ್ಟಡದಲ್ಲಿ ಶಾಲೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿ ಶೌಚಕ್ಕಾಗಿ ತೆರಳಿದ್ದಾಗ ಶೌಚಾಲಯ ಗೋಡೆ ಏಕಾಏಕಿ ಕುಸಿದು ಬಿದ್ದ ಕಾರಣ ಅವಶೇಷಗಳಡಿ ಸಿಕ್ಕಿ ಆಕೆ ಸಾವನ್ನಪ್ಪಿದ್ದಾಳೆ.  ಸ್ಥಳಕ್ಕೆ ಜಿಲ್ಲಾಧಿಕಾರಿ ಜೆ. ಮಂಜುನಾಥ್, ತಹಶೀಲ್ದಾರ್ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT