ಚಾಮರಾಜನಗರ: ದೇಶವನ್ನೇ ಬೆಚ್ಚಿ ಬೀಳಿಸಿದ್ದ 15 ಅಮಾಯಕ ಭಕ್ತರನ್ನು ಬಲಿ ಪಡೆದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇಗುಲದ ವಿಷ ಪ್ರಸಾದ ದುರಂತ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ನಾಲ್ವರು ಆರೋಪಿಗಳು ತಪ್ಪೋಪ್ಪಿಕೊಂಡಿದ್ದಾರೆ. ಇನ್ನು ಸಾಲೂರು ಮಠದ ಇಮ್ಮಡಿ ಮಹದೇವಸ್ವಾಮಿ 1ನೇ ಆರೋಪಿಯಾಗಿದ್ದು, ಟ್ರಸ್ಟ್ ವ್ಯವಸ್ಥಾಪಕ ಮಾದೇಶ ಎರಡನೇ ಹಾಗೂ ಮಾದೇಶನ ಪತ್ನಿ ಅಂಬಿಕಾ ಮೂರನೇ ಮತ್ತು ದೊಡ್ಡಯ್ಯ ನಾಲ್ಕನೇ ಆರೋಪಿಯಾಗಿದ್ದಾರೆ. ಈ ನಾಲ್ವರನ್ನು ಇದೀಗ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಟ್ರಸ್ಟ್ ಪದಾಧಿಕಾರಿಗಳ ನಡುವಿನ ವೈಮನಸ್ಯದಿಂದಾಗಿ ಪ್ರಸಾದಕ್ಕೆ ವಿಷ ಬೆರೆಸಲಾಗಿತ್ತು. ಚಿನ್ನಪ್ಪಿ ಬಣಕ್ಕೆ ಕೆಟ್ಟ ಹೆಸರು ತರುವುದಕ್ಕಾಗಿ ಈ ಸಂಚು ರೂಪಿಸಲಾಗಿದೆ. ಇದಕ್ಕೆ ಮಹದೇವಸ್ವಾಮಿ ಮಾದೇಶ, ಆತನ ಪತ್ನಿ ಅಂಬಿಕಾ ಮತ್ತು ದೊಡ್ಡಯ್ಯನನ್ನು ಬಳಸಿಕೊಂಡಿದ್ದಾರೆ ಎಂದು ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಅವರು ತಿಳಿಸಿದರು.
ಇಂದು ಸಂಜೆ ನಾಲ್ವರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಆರೋಪಿಗಳಿಗೆ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಆದೇಶಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos