ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 
ರಾಜ್ಯ

ಕ್ರಿಶ್ಚಿಯನ್ನರ ಕಲ್ಯಾಣಕ್ಕಾಗಿ ಶೀಘ್ರದಲ್ಲಿಯೇ ಮಂಡಳಿ ರಚನೆ: ಸಿಎಂ ಕುಮಾರಸ್ವಾಮಿ

ರಾಜ್ಯದಲ್ಲಿರುವ ಕ್ರಿಶ್ಚಿಯನ್ನರ ಏಳಿಗೆ ಹಾಗೂ ಕಲ್ಯಾಣಕ್ಕಾಗಿ ಶೀಘ್ರದಲ್ಲಿಯೇ ನೂತನ ಮಂಡಳಿಯನ್ನು ರಚನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿರುವ ಕ್ರಿಶ್ಚಿಯನ್ನರ ಏಳಿಗೆ ಹಾಗೂ ಕಲ್ಯಾಣಕ್ಕಾಗಿ ಶೀಘ್ರದಲ್ಲಿಯೇ ನೂತನ ಮಂಡಳಿಯನ್ನು ರಚನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ. 
ನಗರದಲ್ಲಿ ಆಯೋಜಿಸಿದ್ದ ಕ್ರಿಶ್ಚಿಯನ್ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಆಲಿಸಲು ಹಾಗೂ ಅವರ ಏಳಿಗೆಗಾಗಿ ಹೆಚ್ಚಿನ ಅನುದಾನವನ್ನು ಮೀಸಲಿಡುವುದಾಗಿ ಹಾಗೂ ನೂತನ ಮಂಡಳಿ ರಚನೆ ಮಾಡುವುದಾಗಿ ಹೇಳಿದ್ದಾರೆ. 
ಶೀಘ್ರದಲ್ಲಿಯೇ ಕ್ರಿಶ್ಚಿಯನ್ ಅಭಿವೃದ್ಧಿಗಾಗಿ ಮಂಡಳಿಯನ್ನು ರಚನೆ ಮಾಡಲಾಗುತ್ತದೆ. ಮಂಡಳಿ ಮೂಲಕ ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳನ್ನು ಆಲಿಸಿ, ಪರಿಹಾರಗಳನ್ನು ನೀಡಲಾಗುತ್ತದೆ. ಇದಕ್ಕಾಗಿ ಹೆಚ್ಚಿನ ಅನುದಾನವನ್ನು ಮೀಸಲಿಡಲಾಗುತ್ತದೆ ಎಂದು ತಿಳಿಸಿದ್ದಾರೆ. 
ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ. ಜಾರ್ಜ್, ಸಾ.ರಾ. ಮಹೇಶ್. ಸಿ.ಎಸ್. ಪುಟ್ಟರಾಜು, ಕೋಟಾ ಪೂಜಾರಿ ಸೇರಿದಂತೆ ಇನ್ನಿತರೆ ನಾಯಕರು ಹಾಜರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?