ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನ 
ರಾಜ್ಯ

ಚಾಮರಾಜನಗರ ವಿಷ ಪ್ರಸಾದ ದುರಂತ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಚಾಮರಾಜನಗರದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 16ಕ್ಕೆ ಏರಿಕೆಯಾಗಿದೆ.

ಮೈಸೂರು: ಚಾಮರಾಜನಗರದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 16ಕ್ಕೆ ಏರಿಕೆಯಾಗಿದೆ.
ವಿಷ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಮೈಸೂರಿನ ಜೆಎಸ್​ಎಸ್​ ಆಸ್ಪತ್ರೆಗೆ ದಾಖಲಾಗಿದ್ದ ಹನೂರು ಸಮೀಪದ ಮಾರ್ಟಳ್ಳಿ ನಿವಾಸಿ ನಾಗೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ನಾಗೇಶ್ ಅವರು ಕಳೆದ​ 8 ದಿನಗಳಿಂದ ವೆಂಟಿಲೇಟರ್‌ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 8.45ರ ವೇಳೆಗೆ ಮೃತಪಟ್ಟಿದ್ದಾರೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮಾಹಿತಿ ನೀಡಿದ್ದಾರೆ.
ದುರಂತ ಸಂಭವಿಸಿದ ದಿನ ಮೇಕೆ ಮೇಯಿಸಲು ತೆರಳಿದ್ದ ನಾಗೇಶ್​, ಮಾರ್ಗಮಧ್ಯೆ ದೇವಸ್ಥಾನಕ್ಕೆ ತೆರಳಿ ಪ್ರಸಾದ ಸೇವಿಸಿ, ಕಾಡಿಗೆ ಹೋಗಿದ್ದರು. ಪ್ರಸಾದ ಸೇವಿಸಿ ಕೆಲವರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡು‌ ಫೋನ್ ಮಾಡಿ ಕರೆಸಿಕೊಂಡು ಬೈಕ್‌ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದರು.
ಮೃತನಿಗೆ ಪತ್ನಿ ಹಾಗೂ ನಾಲ್ಕು ಹೆಣ್ಣು ಮಕ್ಕಳು ಇದ್ದಾರೆ. ಜೆಎಸ್ಎಸ್ ಆಸ್ಪತ್ರೆಯಿಂದ ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನಿಸಲಾಗಿದ್ದು, ಬಳಿಕ ಚಾಮರಾಜನಗರಕ್ಕೆ ರವಾನಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Horrible waste of Humanity': ಉಕ್ರೇನ್ ಮೇಲೆ ರಷ್ಯಾದ ಅತಿದೊಡ್ಡ ವೈಮಾನಿಕ ದಾಳಿಗೆ ಟ್ರಂಪ್ ಆಕ್ರೋಶ!

ಮದ್ದೂರಿನಲ್ಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲಾಠಿಚಾರ್ಜ್; 21 ಮಂದಿ ಬಂಧನ; Video

Mehul Choksi ಹಸ್ತಾಂತರಿಸಿದರೆ, ಮುಂಬೈ ಜೈಲಿನಲ್ಲಿ ವೈದ್ಯಕೀಯ ಆರೈಕೆ, ಹಾಸಿಗೆ, ವೈಯಕ್ತಿಕ ಸ್ಥಳಾವಕಾಶ ವ್ಯವಸ್ಥೆ: ಬೆಲ್ಜಿಯಂಗೆ ಭಾರತ ಭರವಸೆ!

Ramayana: ಸೀತಾ ಪಾತ್ರಕ್ಕೆ Miss Universe India 2025 'ಮಣಿಕಾ' ಆಯ್ಕೆ!

Maddur: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ; ನಾಲ್ವರು ಹೋಂಗಾರ್ಡ್​ ಸೇರಿ 8 ಮಂದಿ ಗಾಯ; ಸೆಕ್ಷನ್ 144 ಜಾರಿ; Video

SCROLL FOR NEXT