ಸಂಗ್ರಹ ಚಿತ್ರ 
ರಾಜ್ಯ

ಕೆಎಎಸ್ ಅಧಿಕಾರಿಗಳ ಹುದ್ದೆ ರಕ್ಷಿಸುವ ಮಸೂದೆ ಪಾಸ್

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ)ದಡಿ 1998. 1999, 2000ನೇ ಸಾಲಿನಲ್ಲಿ ನೇಮಕಗೊಂಡು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದ 47ಕ್ಕೂ ಹೆಚ್ಚು ಕೆಎಎಸ್ ಅಧಿಕಾರಿಗಳಿಗೆ ಸದ್ಯಕ್ಕೆ ನಿರಾಳವಾಗಿದ್ದಾರೆ...

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ)ದಡಿ 1998. 1999, 2000ನೇ ಸಾಲಿನಲ್ಲಿ ನೇಮಕಗೊಂಡು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದ 47ಕ್ಕೂ ಹೆಚ್ಚು ಕೆಎಎಸ್ ಅಧಿಕಾರಿಗಳಿಗೆ ಸದ್ಯಕ್ಕೆ ನಿರಾಳವಾಗಿದ್ದಾರೆ. 
2018ನೇ ಸಾಲಿನ ಕರ್ನಾಟಕ ಸಿವಿಲ್ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕಕ್ಕೆ ಉಭಯ ಸದನಗಳು ಅಂಗೀಕಾರ ನೀಡಿದೆ. 
ಪ್ರತಿಪಕ್ಷಗಳ ವಿರೋಧದ ನಡುವೆಯೂ ವಿಧೇಯಕವನ್ನು ಧ್ವನಿ ಮತದ ಮೂಲಗ ಒಪ್ಪಿಗೆ ನೀಡಲಾಯಿತು. ವಿಧಾನಸಬೆ ಮತ್ತು ವಿಧಾನಪರಿಷತ್ತ ನಲ್ಲಿ ಕಾನೂನು ಸಚಿವ ಕೃಷ್ಣಬೈರೇಗೌಡ ವಿಧೇಯಕವನ್ನು ಪರ್ಯಾಲೋಚಿಸುವಂತೆ ಸೂಚಿಸಿದರು. ಸಭಾಧ್ಯಕ್ಷು ವಿಧೇಯಕವನ್ನು ಮತಕ್ಕೆ ಹಾಕಿದಾದ ಧ್ವನಿಮತದಿಂದ ಅಂಗೀಕರಿಸಲಾಯಿತು. 
1998, 1999, 2000ನೇ ಸಾಲಿನಲ್ಲಿ ನಡೆದ ಪ್ರೊಬೆಷನರಿ ಹುದ್ದೆಯ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಕ್ರಮವಾಗಿ ನೇಮಕಗೊಂಡಿರುವವರನ್ನು ವಜಾಗೊಳಿಸಿ ಎಂದು ಹೈಕೋರ್ಟ್ ನೀಡಿರುವ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಸರ್ಕಾರವು ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು. ಇಲ್ಲವೇ, ನ್ಯಾಯಾಂಗ ನಂದನೆ ಎದುರಿಸಬೇಕಾಗಿತ್ತು. ಇದರಿಂದ ತಪ್ಪಿಸಿಕೊಳ್ಳಲು ಸಿವಿಲ್ ಸೇವೆಗಳ ನೇಮಕಾತಿ ವಿಧೇಯಕವನ್ನು ರಚಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT