ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನ 
ರಾಜ್ಯ

ಚಾಮರಾಜನಗರ ವಿಷ ಪ್ರಸಾದ ದುರಂತ: ಸಾವಿನ ಸಂಖ್ಯೆ 17ಕ್ಕೆ ಏರಿಕೆ

ಚಾಮರಾಜನಗರದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರ....

ಮೈಸೂರು: ಚಾಮರಾಜನಗರದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 17ಕ್ಕೆ ಏರಿಕೆಯಾಗಿದೆ.
ವಿಷ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಮೈಸೂರಿನ ಖಾಸಗಿ​ ಆಸ್ಪತ್ರೆಗೆ ದಾಖಲಾಗಿದ್ದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದೊರೆಸ್ವಾಮಿಮೇಡು ಗ್ರಾಮದ ನಿವಾಸಿ ರಂಗನ್(45) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ರಂಗನ್ ಅವರು ಕಳೆದ​ 9 ದಿನಗಳಿಂದ ವೆಂಟಿಲೇಟರ್‌ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.
ವಿಷ ಪ್ರಸಾದ ಸೇವಿಸಿ 100 ಕ್ಕೂ ಹೆಚ್ಚು ಮಂದಿ ಮೈಸೂರಿನ ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ ಹಲವರು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

34 ಮಾನವ ಬಾಂಬ್‌, 400 ಕೆಜಿ RDX 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ- ಎಲ್ಲೆಡೆ ಕಟ್ಟೆಚ್ಚರ!

'Delhi Metroಗೆ ಹೋಲಿಕೆ ಮಾಡಿದರೆ Bengaluru Metro ದರ ಅತ್ಯಂತ ದುಬಾರಿ': BMRCL, ರಾಜ್ಯ ಸರ್ಕಾರದ ವಿರುದ್ಧ Tejasvi Surya ಕಿಡಿ!

"Dismantle India": 'ಭಾರತವನ್ನು ಕೆಡವಿ, ವಿಭಜಿಸಿ' ಎಂದ ಆಸ್ಟ್ರಿಯಾ ಅರ್ಥಶಾಸ್ತ್ರಜ್ಞನ 'X' ಖಾತೆ ನಿಷೇಧ!

Who Killed the Women in Dharmasthala: ಕೊಂದವರು ಯಾರು? ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ!

ಇಂಧನ ಬೆಲೆ ಸೇರಿದಂತೆ ಉಕ್ರೇನ್ ಸಂಘರ್ಷದ ಪ್ರತಿಕೂಲ ಪರಿಣಾಮ ಜಾಗತಿಕ ದಕ್ಷಿಣ ದೇಶಗಳ ಮೇಲೆ ಬೀರುತ್ತಿದೆ: UNGA ಯಲ್ಲಿ ಭಾರತ ವಿಷಾದ

SCROLL FOR NEXT