ಮೈಸೂರು: ಚಾಮರಾಜನಗರ ಜಿಲ್ಲೆ ಸುಳ್ವಾಡಿಯ ಕಿಚ್ ಗುತ್ತಿ ಮಾರಮ್ಮ ದೇವಾಲಯದ ವಿಷಪೂರಿತ ಪ್ರಸಾದ ಸೇವನೆ ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಚ್ ಆಗಿದ್ದ ಮೂವರು ಮತ್ತೆ ಆಸ್ಪತ್ರೆ ಸೇರಿದ್ದಾರೆ.
ಎಂಜಿ ದೊಡ್ಡಿಯ ಪಳನಿಯಮ್ಮ, ಮಾದಮ್ಮ ಮತ್ತು ಮಾಧಾ ಎಂಬವರು ಕೊಳ್ಳೇಗಾಲದ ಜನರಲ್ ಆಸ್ಪತ್ರೆಗೆ ಮತ್ತೆ ದಾಖಲಾಗಿದ್ದಾರೆ.
ಈ ಮಧ್ಯೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದ ರಂಗನ್ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ನೇತೃತ್ವದಲ್ಲಿನ ಅಧಿಕಾರಿಗಳ ನಿಯೋಗ ಶ್ರದ್ದಾಂಜಲಿ ಸಲ್ಲಿಸಿತು.
ಬಳಿಕ ಮಾತನಾಡಿದ ಸಿ. ಪುಟ್ಟರಂಗಶೆಟ್ಟಿ, ಮೃತರ ಸಂಬಂಧಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸೂಕ್ತ ಕ್ರಮ ಕೈಗೊಂಡಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವವವರ ಬಗ್ಗೆ ಅಗತ್ಯ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.