ಮಂಡ್ಯ: ಜೆಡಿಎಸ್ ಮುಖಂಡ ಹಾಗೂ ಮಂಡ್ಯ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಲಲಿತಾ ಅವರ ಪತಿ ತೊಪ್ಪನಹಳ್ಳಿ ಪ್ರಕಾಶ್ ಅವರನ್ನು ಸೋಮವಾರ ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಮಂಡ್ಯ ಜಿಲ್ಲೆ ಮದ್ದೂರಿನ ಟಿ.ಬಿ. ವೃತ್ತದ ಬಳಿ ಪ್ರಕಾಶ್(48) ಅವರನ್ನು ಬರ್ಬರವಾಗಿ ಕೊಲೆ ಮಾಡಿ, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಪ್ರಕಾಶ್ ಅವರು ಕಾರಿನಲ್ಲಿ ಕುಳಿತಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರ ಕತ್ತು ಸೀಳಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರಕಾಶ್ ಅವರನ್ನು ಮದ್ದೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ನೂರಾರು ಜನರು ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆಯ
ರಾಜಕಾರಣದಲ್ಲಿ ಸಕ್ರಿಯವಾಗಿದ್ದ ಪ್ರಕಾಶ್ ಅವರನ್ನು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.