ಹತ್ಯೆಯಾದ ಪ್ರಕಾಶ್ 
ರಾಜ್ಯ

ಜೆಡಿಎಸ್‌ ಮುಖಂಡ ಪ್ರಕಾಶ್‌ ಹತ್ಯೆ: ಮದ್ದೂರಿನಲ್ಲಿ ಬಿಗುವಿನ ವಾತಾವಾರಣ; ಪೊಲೀಸ್ ಬಂದೋಬಸ್ತ್

ಮದ್ದೂರು ತಾಲೂಕು ತೊಪ್ಪನಹಳ್ಳಿ ಜೋಡಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನಾಗಿದ್ದ ಜೆಡಿಎಸ್‌ ಮುಖಂಡ ಪ್ರಕಾಶ್‌ ಹತ್ಯೆ ನಂತರ ಮದ್ದೂರಿನಲ್ಲಿ ಬಿಗುವಿನ ...

ಮಂಡ್ಯ: ಮದ್ದೂರು ತಾಲೂಕು ತೊಪ್ಪನಹಳ್ಳಿ ಜೋಡಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನಾಗಿದ್ದ ಜೆಡಿಎಸ್‌ ಮುಖಂಡ ಪ್ರಕಾಶ್‌ ಹತ್ಯೆ ನಂತರ ಮದ್ದೂರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಿ.ಶಿವಪ್ರಕಾಶ್‌, ಮಳವಳ್ಳಿ ಡಿವೈಎಸ್ಪಿ ಶೈಲೇಂದ್ರ, ಸಿಪಿಐಗಳಾದ ಎನ್‌. ವಿ.ಮಹೇಶ್‌, ನವೀನ್‌ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಟನೆ ಹಿನ್ನೆಲೆಯಲ್ಲಿ ಮದ್ದೂರು ಹಾಗೂ ತೊಪ್ಪನಹಳ್ಳಿ ಗ್ರಾಮದಲ್ಲಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ. 
ಇನ್ನೂ ಶವವಿರಿಸಿಕೊಂಡು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕುಮಾರ ಸ್ವಾಮಿ ಭೇಟಿ ನೀಡಬೇಕು, ಇಲ್ಲದಿದ್ದರೇ ಮರಣೋತ್ತರ ಪರೀಕ್ಷೆಗೆ ಅವಕಾಶ ಕೊಡುವುದಿಲ್ಲ ಎಂದು ಬಿಗಿ ಪಟ್ಟು ಹಿಡಿದಿದ್ದರು, ಈ ವೇಳೆ ಪೊಲೀಸರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿತ್ತು. ಮುಖ್ಯಮಂತ್ರಿ ಕುಮಾರ ಸ್ವಾಮಿ ಇಂದು ಗ್ರಾಮಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
2016ರ ಡಿಸೆಂಬರ್‌ 25ರಂದು ತೊಪ್ಪನಹಳ್ಳಿ ಗ್ರಾಮದಲ್ಲಿ ನಡೆದ ಜೆಡಿ ಎಸ್‌ ಕಾರ್ಯಕರ್ತರ ಜೋಡಿ ಕೊಲೆ ಪ್ರಕರಣಕ್ಕೆ ಪ್ರಕಾಶ್‌ ಪ್ರಮುಖ ಸಾಕ್ಷಿದಾರರಾಗಿದ್ದರು. ಹೆಲ್ಮೆಟ್‌ ಧರಿಸಿ ಬೈಕ್‌ ನಲ್ಲಿ ಬಂದ ನಾಲ್ಕೈದು ಜನರ ಗುಂಪು ಪ್ರಕಾಶ್‌ ಕುಳಿತಿದ್ದ ಕಾರಿನಲ್ಲೇ ಭೀಕರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT