ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಭೀಕರ ಅಪಘಾತ: ಖಾಸಗಿ ಬಸ್ ಗೆ ಬೈಕ್ ಢಿಕ್ಕಿ, ಬೈಕ್ ಸವಾರ ಸಜೀವ ದಹನ

ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡಿದ ಪರಿಣಾಮ ಬೆಂಕಿ ಹೊತ್ತಿ ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿ ಸಾವನ್ನಪ್ಪಿದ ಭೀಕರ ಘಟನೆ ಕೋಲಾರದಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
Srinivasa Murthy VN
Updated On : 26 Dec 2018, 11:50 am
ಕೋಲಾರ: ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡಿದ ಪರಿಣಾಮ ಬೆಂಕಿ ಹೊತ್ತಿ ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿ ಸಾವನ್ನಪ್ಪಿದ ಭೀಕರ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ  ಈ ಅಪಘಾತ ನಡೆದಿದ್ದು, ಬಂಗಾರಪೇಟೆಯ ವಿವೇಕಾನಂದ ನಗರದ ಯುವಕ ನೀರಜ್(20) ಸ್ಥಳದಲ್ಲಿ ಸುಟ್ಟು ಕರಕಲಾದ ಬೈಕ್ ಸವಾರ. ಬೆಳ್ಳಂಬೆಳಗ್ಗೆ ನೀರಜ್ ಹಾಗೂ ಆತನ ಸ್ನೇಹಿತ ಬೈಕ್‍ನಲ್ಲಿ ತೆರೆಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ ಹೊಡಿದಿದೆ. ಈ ಭೀಕರ ಅಪಘಾತದ ಪರಿಣಾಮ ಬೈಕ್‍ ಟ್ಯಾಂಕರ್ ಗೆ ಬೆಂಕಿ ಹೊತ್ತಿಕೊಂಡು ಬೈಕ್ ಸವಾರ ನೀರಜ್ ಸ್ಥಳದಲ್ಲೇ ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದಾನೆ.
ಬೈಕ್‍ನಲ್ಲಿದ್ದ ಇನ್ನೋರ್ವ ಯುವಕ ಮಾತ್ರ ಅಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸುಮಾರು ಎರಡುವರೆ ಲಕ್ಷ ಮೌಲ್ಯದ ಯಮಹ ಆರ್1 ಬೈಕ್ ಅಪಘಾತದಲ್ಲಿ ಸುಟ್ಟು ಕರಕಲಾಗಿದೆ. ಘಟನೆ ಕುರಿತು ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement