ಸಂಗ್ರಹ ಚಿತ್ರ 
ರಾಜ್ಯ

ಹೊಸ ವರ್ಷಾಚರಣೆ ವೇಳೆ ಪಟಾಕಿ ನಿಷೇಧಿಸಿ: ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸುವುದನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ...

ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸುವುದನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ. 
ನಗರದ ಪುರಭವನದ ಆವರಣದಲ್ಲಿ ನಡೆಸಲಾದ ಧರಣಿ ವೇಳೆ ಮಾತನಾಡಿದ ಹಿಂದೂ ಜನಜಾಗೃತಿ ಸಂಚಾಲಕ ಮೋಹನ್ ಗೊಡ ಅವರು, ದೀಪಾವಳಿ ಹಬ್ಬದಂತು ಪಟಾಕಿ ಸಿಡಿಸುವುದಕ್ಕೆ ಸಮಯವನ್ನು ನಿಗದಿ ಮಾಡಲಾಗಿತ್ತು. ಇದೇ ರೀತಿಯಲ್ಲಿಯ ಹೊಸ ವರ್ಷಾಚರಣೆ ವೇಳೆಯೂ ಪಟಾಕಿ ಸಿಡಿಸುವುದಕ್ಕೆ ಸಮಯವನ್ನು ನಿಗದಿ ಮಾಡಬೇಕೆಂದು ಹೇಳಿದ್ದಾರೆ. 
ಇದೇ ವೇಳೆ ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ಮೇಲೆ ನಿಷೇಧ ಹೇರುವಂತೆ ಕೇಳಿ ಬರುತ್ತಿರುವ ಆಗ್ರಹ ಹಾಗೂ ಆರೋಪಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. 
ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂಪರ ಸಂಘಟನೆಗಳನ್ನು ಮುಕ್ತಾಯಗೊಳಿಸಲು ಪಿತೂರಿಗಳು ನಡೆಯುತ್ತಿವೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಈ ರೀತಿಯ ಯತ್ನಗಳು ಸಾಕಷ್ಟು ನಡೆಸಿದ್ದವು. ಆದರೆ, ಅದಾವುದೂ ಯಶಸ್ವಿಯಾಗಲಿಲ್ಲ. ಇದೀಗ ಮತ್ತೆ ಅದೇ ರೀತಿಯ ಯತ್ನಗಳು ಮತ್ತೆ ನಡೆಯುತ್ತಿವೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ