ರಾಜ್ಯ

ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಪ್ರಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅಪಸ್ವರ

Nagaraja AB

ಬಾದಾಮಿ:  ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ  ಪ್ರಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿರುವಂತೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ  ಅಪಸ್ವರ ಎತ್ತಿದ್ದಾರೆ.

ರಾಜ್ಯದಲ್ಲಿ‌ ಮುಂದಿನ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ  ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು‌ ಪ್ರಾರಂಭಿಸುವುದಾಗಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸುವುದಾಗಿ  ಅವರು ಹೇಳಿದ್ದಾರೆ.

 ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿದ್ದ ಪುಸ್ತಕಗಳ ಉಚಿತ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆ ಕಲಿಕೆ ಮತ್ತು ಕನ್ನಡ ಮಾಧ್ಯಮದ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು.‌ನಾನು ಹೈಸ್ಕೂಲ್ ವರೆಗೆ ಕನ್ನಡ ಮಾಧ್ಯಮದಲ್ಲಿಯೇ ಕಲಿತವನು. ನಾನೇನು ಪೆದ್ದನಾ?  ಎಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಉಳಿಯಬೇಕು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
SCROLL FOR NEXT