ಲಾಂಛನ ಬಿಡುಗಡೆ ಚಿತ್ರ 
ರಾಜ್ಯ

11ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 11ನೇ ಆವೃತ್ತಿಯ ಲಾಂಛನ ಬಿಡುಗಡೆ ಮಾಡಿದರು.

ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿಂದು  ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 11ನೇ ಆವೃತ್ತಿಯ ಲಾಂಛನ   ಬಿಡುಗಡೆ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019 ಫೆಬ್ರವರಿ 7 ರಿಂದ 14ರವರೆಗೆ ನಡೆಯಲಿರುವ ಚಲನಚಿತ್ರೋತ್ಸವದಲ್ಲಿ  ವಿವಿಧ ಭಾಷೆಗಳ 2 ಸಾವಿರಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನ ಕಾಣಲಿವೆ. 7 ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ನಗರದ ಒರಾಯನ್ ಮಾಲ್ ನ 11 ಪರದೆಗಳಲ್ಲಿ ಚಿತ್ರಗಳು ಪ್ರದರ್ಶನಗಳ್ಳಲಿದ್ದು,  ಚಲನಚಿತ್ರೋತ್ಸವ ಸಂಘಟನಾ  ಸಮಿತಿಯು ಚಲನಚಿತ್ರೋತ್ಸವದಲ್ಲಿ ಗುಣಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಆದ್ಯತೆ ನೀಡುವ ಹಾಗೂ ವೆಚ್ಚ ಕಡಿಮೆಗೊಳಿಸುವ ಉದ್ದೇಶ ಹೊಂದಿದೆ ಎಂದರು.

ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್  ಮಾತನಾಡಿ, ನಿರ್ಧಿಷ್ಟ ವೇಳಾಪಟ್ಟಿ ಹೊಂದುವುದರಿಂದ ಸಿನಿಮಾ ಆಸಕ್ತರು ಭಾಗವಹಿಸುವುದಕ್ಕೂ ಅನುಕೂಲವಾಗಲಿದೆ ಎಂದು ಹೇಳಿದರು.
ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel