ಚಿಕ್ಕೋಡಿ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ದತ್ತು ಹಕ್ಯಾಗೋಳ (78) ಮೃತಪಟ್ಟಿದ್ದಾರೆ. ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ದತ್ತು ಹಕ್ಯಾಗೋಳ ಹಾಗೂ ಬೈಕ್ ಸವಾರ ಸುರೇಶ್ ಈರಪ್ಪ ಗಡೇಕಾರ (50) ಸಾವಿಗೀಡಾಗಿದ್ದಾರೆ.
ಹಿಟ್ಲೆಯ ಮಸೂದಾ ದೇವಸ್ಥಾನಕ್ಕೆ ಮಾಜಿ ಶಾಸಕ ಹಾಗೂ ಸುರೇಶ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಟ್ನಿ ಕ್ರಾಸ್ ಬಳಿ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಅಪಘಾತದ ಪರಿಣಾಮ ದತ್ತು ಹಕ್ಯಾಗೋಳ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಸಹ ಸವಾರನಾಗಿದ್ದ ಸುರೇಶ್ ಗಂಬೀರ ಗಾಯಗಳೊಡನೆ ಸಂಕೇಶ್ವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣಿಸಿದರು.
ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯಾಗಿಸುವ ಹೋರಾಟದಲ್ಲಿ ಸಕ್ರಿಯರಾಗಿದ್ದ ಸರಳ, ಸಜ್ಜನ ವ್ಯಕ್ತಿ ದತ್ತು ಹಕ್ಯಾಗೋಳ 2004ರಲ್ಲಿ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.
ಘಟನೆ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics