ಗದಗ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, 6 ಮಂದಿ ದಾರುಣ ಸಾವು 
ರಾಜ್ಯ

ಗದಗ:ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, 6 ಮಂದಿ ದಾರುಣ ಸಾವು

ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದಾರುಣ ಸಾವಿಗೀಡಾದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಗದಗ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದಾರುಣ ಸಾವಿಗೀಡಾದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಶನಿವಾರ ತಡರಾತ್ರಿ ಗದಗದ ಮುಂಡರಗಿ ರಸ್ತೆ ರಿಂಗ್ ರೋಡ್ ಬಳಿ ನಡೆದ ಘಟನೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕ (ಡಿವೈಡರ್)ಗೆ ಡಿಕ್ಕಿಯಾಗಿ ಬಳಿಕ ಇನ್ನೊಂದು ಕಾರಿಗೆ ಗುದ್ದಿದೆ.

ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.4 ಜನರು ತೀವ್ರ ಗಾಯಗೊಂಡಿದ್ದಾರೆ.

ಆನಂದ ಬೆಟಗೇರಿ, ಸಿದ್ದು ಕೋರಿಶೆಟ್ಟಿ, ಮನೋಜಕುಮಾರ ಕರಡಿಗುಡ್ಡ, ಅಮೃತ ಹಾಗೂ ಚನ್ನುವಾಡದ್ ಎನ್ನುವವರು ಸಾವನ್ನಪ್ಪಿದ ದುರ್ದೈವಿಗಳು. ಇವರೆಲ್ಲರೂ ಧಾರವಾಡದ ಹೆಬ್ಬಳ್ಳಿ ಅಗಸಿ‌ ನಿವಾಸಿಗಳಾಗಿದ್ದರು.

ಇನ್ನೊಂದು ಕಾರಿನಲ್ಲಿದ್ದ  ಗದಗ ಮೂಲದ ಮಂಜುನಾಥ ಹಳ್ಳೀಕೇರಿ, ವಿರುಪಾಕ್ಷಪ್ಪ ಅಬ್ಬೀಗೇರಿ, ವಿಜಯಕುಮಾರ ಬನವಾಸಿ, ವಿಶ್ವನಾಥ ಕೆರೂರ ಎಂಬುವವರಿಗೆ ತೀವ್ರ ಗಾಯಗಳಾಗಿದ್ದು ಇವರುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!