ರಾಜ್ಯ

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವು ಪ್ರಕರಣ: ತನಿಖೆಗೆ ಡಿ.ಕೆ.ಶಿವಕುಮಾರ್, ಶೋಭಾ ಕರಂದ್ಲಾಜೆ ಆಗ್ರಹ

Manjula VN
ಬೆಂಗಳೂರು: ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ತನಿಖೆಗೆ ಆಗ್ರಹಿಸಿದ್ದಾರೆ. 
ರಾಜ್ಯ ಪೊಲೀಸ್ ಇಲಾಖೆಯ ದಕ್ಷ, ನಿಷ್ಠುರ, ಹಿರಿಯ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರು ಹೈದರಾಬಾದ್'ನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಉಸಿರಾಟ ಹಾಗೂ ಅತೀವ್ರ ಜ್ವರದಿಂದಾಗಿ ಮಧುಕರ್ ಶೆಟ್ಟಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 
ಮಧುಕರ್ ಶೆಟ್ಟಿಯವರ ಸಾವು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶಿವಕುಮಾರ್ ಅವರು, ಶೆಟ್ಟಿ ಅತ್ಯಂತ ಪ್ರಾಮಾಣಿಕ ಅಧಿಕಾರಿಯಾಗಿದ್ದರು. ಅವರ ಸಾವಿಗೆ ಪ್ರಮುಖ ಸಾವು ತಿಳಿಯಲು ತನಿಖೆಯ ಅಗತ್ಯವಿದೆ ಎಂದು ಹೇಳಿದ್ದಾರೆ. 
ಇದರಂತೆ ಶೋಭಾ ಕರಂದ್ಲಾಜೆಯವರು ಪ್ರತಿಕ್ರಿಯೆ ನೀಡಿ, ರಾಜ್ಯ ಸರ್ಕಾರ ಮಧುಕರ ಶೆಟ್ಟಿಯವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ಶೆಟ್ಟಿಯವರು ಲೋಕಾಯುಕ್ತ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸಾಕಷ್ಟು ಪ್ರಮುಖ ಪ್ರಕರಣಗಳನ್ನು ನೋಡಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ. 
ತನಿಖೆ ಆಗ್ರಹಗಳಿಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, ಹೈದರಾಬಾದ್ ಆಸ್ಪತ್ರೆಯಿಂದ ಹಾಗೂ ಪೊಲೀಸ್ ತರಬೇತಿ ವಿಭಾಗದಿಂದ ವರದಿಗಳನ್ನು ಪಡೆಯುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದ್ದಾರೆ. ವರದಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ವರದಿಯಲ್ಲಿ ಅನುಮಾನಸ್ಪದ ವಿಚಾರಗಳು ತಿಳಿದು ಬಂದಿದ್ದೇ ಆದರೆ, ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ. 
SCROLL FOR NEXT