ಸಾಂದರ್ಭಿಕ ಚಿತ್ರ 
ರಾಜ್ಯ

ಪೊಲೀಸ್ ಮನೆಯಿಂದಲೇ ಅಪಾರ ಪ್ರಮಾಣದ ಚಿನ್ನ, ನಗದು ಕದ್ದ ಖದೀಮರು!

ಪೊಲೀಸ್ ಕಾನ್ಸ್ಟೇಬಲ್ ಮನೆಗೆ ನುಗ್ಗಿದ ದರೋಡೆಕೋರರು 3 ಲಕ್ಷ ರೂಪಾಯಿ ನಗದು ಮತ್ತು ...

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಮನೆಗೆ ನುಗ್ಗಿದ ದರೋಡೆಕೋರರು 3 ಲಕ್ಷ ರೂಪಾಯಿ ನಗದು ಮತ್ತು ಸುಮಾರು 14 ಲಕ್ಷ ರೂಪಾಯಿ ಬೆಲೆಬಾಳುವ ನಗದನ್ನು ದೋಚಿದ ಘಟನೆ ಆನಂದ್ ರಾವ್ ವೃತ್ತದಲ್ಲಿರುವ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಕಳೆದ ಶನಿವಾರ ರಾತ್ರಿ ನಡೆದಿದೆ.

ಪೊಲೀಸ್ ಅಧಿಕಾರಿಗೆ ಪರಿಚಯವಿರುವವರೇ ಈ ದುಷ್ಕೃತ್ಯ ಎಸಗಿರಬಹುದು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯ ಮುಖ್ಯ ಕಾನ್ಸ್ಟೇಬಲ್ ಆಗಿರುವ ವೆಂಕಟೇಶ್ ಎಂದಿನಂತೆ ಕರ್ತವ್ಯದಲ್ಲಿದ್ದರು. ಅವರ ಪತ್ನಿ ಆಸ್ಪತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಮನೆಯ ಬಾಗಿಲು ಮುರಿದಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ರಾತ್ರಿ 8.30ರ ಸುಮಾರಿಗೆ ವೆಂಕಟೇಶ್ ಗೆ ಕರೆ ಮಾಡಿ ವಿಷಯ ತಿಳಿಸಿದರು. ತಮ್ಮ ಮನೆಯಲ್ಲಿ ಕಳ್ಳತನವಾಗಿದ್ದು ಅರಿವಿಗೆ ಬಂದ ಕೂಡಲೇ ವೆಂಕಟೇಶ್ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು,

ಘಟನೆಗೆ ಕೆಲ ದಿನಗಳ ಮೊದಲು ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ದಂಪತಿ ಚಿನ್ನ ತಂದು ಮನೆಯಲ್ಲಿ ಇಟ್ಟಿದ್ದರು. ಇದನ್ನು ಅರಿತ ಯಾರೋ ಪರಿಚಯಸ್ಥರೇ ದರೋಡೆ ಮಾಡಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT