ಸಾಂದರ್ಭಿಕ ಚಿತ್ರ 
ರಾಜ್ಯ

ಹೊಸ ವರ್ಷಾಚರಣೆಗೆ ಕೆಲವೇ ಗಂಟೆಗಳು ಬಾಕಿ: ಪೊಲೀಸರಿಂದ ತೀವ್ರ ಕಟ್ಟೆಚ್ಚರ

2018ರ ವರ್ಷ ಮುಗಿದು ಹೊಸ ವರ್ಷ 2019 ಕಾಲಿಡಲು ಇನ್ನು ಕೆಲವೇ ಗಂಟೆಗಳು ಬಾಕಿ.

ಬೆಂಗಳೂರು: 2018ರ ವರ್ಷ ಮುಗಿದು ಹೊಸ ವರ್ಷ 2019 ಕಾಲಿಡಲು ಇನ್ನು ಕೆಲವೇ ಗಂಟೆಗಳು ಬಾಕಿ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ಯುವಕ-ಯುವತಿಯರು ಸೇರಿದಂತೆ ವಿವಿಧ ವಯೋಮಾನಗಳ ನಾಗರಿಕರು ಹೊಸ ವರ್ಷಾಚರಣೆಗೆ ಸಜ್ಜಾಗಿದ್ದಾರೆ.

ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ನಡೆದ ಅಹಿತಕರ ಘಟನೆ ಮರುಕಳಿಸದಂತೆ ಪೊಲೀಸರು ಈ ಬಾರಿ ಬಿಗಿ ಭದ್ರತಾ ವ್ಯವಸ್ಥೆ, ಕಣ್ಗಾವಲು ಇರಿಸಿದ್ದಾರೆ. ಸಂಭ್ರಮದ ಹೆಸರಿನಲ್ಲಿ ಕಿಡಿಗೇಡಿತನ ನಡೆಸುವವರಿಗೆ ಪೊಲೀಸರು ಎಚ್ಚರಿಕೆಯನ್ನೂ ನೀಡಿದ್ದಾರೆ.

ಹೊಸ ವರ್ಷಾಚರಣೆ ಅದ್ಧೂರಿಯಾಗಿ ನಡೆಯುವ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಮಾತ್ರವಲ್ಲದೆ ಚರ್ಚ್‌ಸ್ಟ್ರೀಟ್‌, ಇಂದಿರಾನಗರ, ಮಾರತ್ತಳ್ಳಿ, ಜಯನಗರ ಮತ್ತಿತರ ಕಡೆ ಪೊಲೀಸರು ಭಾರಿ ಕಟ್ಟೆಚ್ಚರ ವಹಿಸಲಿದ್ದಾರೆ. ಮಫ್ತಿಯಲ್ಲಿ ಸಾವಿರಾರು ಪೊಲೀಸರು ನಿಗಾ ವಹಿಸಲಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ತೀವ್ರ ಎಚ್ಚರಿಕೆ ವಹಿಸಲಾಗಿದೆ.

2,500 ಪೊಲೀಸ್‌ ವಾಹನಗಳು: ನಗರ ಕಮಿಷನರೇಟ್‌ನ ಸುಮಾರು 2,500ಕ್ಕೂ ಹೆಚ್ಚು ವಾಹನಗಳು ಇಂದು ಸಂಜೆ 7 ಗಂಟೆಯಿಂದ ನಾಳೆ ಬೆಳಗಿನವರೆಗೂ ಕರ್ತವ್ಯದಲ್ಲಿರುತ್ತವೆ. 270 ಹೊಯ್ಸಳ, 1700 ಚೀತಾ ಮತ್ತು ಎಲ್ಲ ಪೊಲೀಸ್‌ ಜೀಪ್‌ಗಳು ರಾತ್ರಿ ಪಾಳಿ ಗಸ್ತು ನಡೆಸಲಿವೆ. ಸೂಕ್ಷ್ಮ ಪ್ರದೇಶಗಳಲ್ಲಿ ಅಧಿಕಾರಿಗಳು ಸವೀರ್ಸ್ ರಿವಾಲ್ವರ್‌ ಮತ್ತು ಬಂದೂಕುಗಳ ಜತೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ.

ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಇಂದು ನಗರದಾದ್ಯಂತ ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್ ಗಳು ಮಧ್ಯರಾತ್ರಿಯವರೆಗೂ ತೆರೆದಿರುತ್ತದೆ. ಪಾರ್ಟಿಯಲ್ಲಿ ಭಾಗಿಯಾಗುವ ಯುವಕ-ಯುವತಿಯರಿಗೆ ಖಾಸಗಿ ಭದ್ರತೆ ಒದಗಿಸಲು ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದರೆ ಆಯೋಜಕರೇ ಹೊಣೆಯಾಗುತ್ತಾರೆ ಎಂದು ನಗರ ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!