ಪ್ರಧಾನಮಂತ್ರಿ ನರೇಂದ್ರ ಮೋದಿ 
ರಾಜ್ಯ

ನಗರ ಭೇಟಿ ವೇಳೆ ಮಹದಾಯಿ ವಿಚಾರ ಪ್ರಸ್ತಾಪಿಸುತ್ತಾರಾ ಪ್ರಧಾನಿ ಮೋದಿ?

ನಗರದಲ್ಲಿ ಬಿಜೆಪಿ ಭಾನುವಾರ ನಡೆಸುತ್ತಿರುವ ಪರಿವರ್ತನಾ ಯಾತ್ರೆಯ ಸಮಾರೋಪಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ ಯಾತ್ರೆ ಹೊರಪಡಿಸಿ ಬೇರೆ ಯಾವುದೇ ವಿಚಾರದ ಬಗ್ಗೆಯೂ ಮಾತನಾಡುವ ಸಾಧ್ಯತೆ ಕಡಿಮೆ ಎಂದು...

ಬೆಂಗಳೂರು: ನಗರದಲ್ಲಿ ಬಿಜೆಪಿ ಭಾನುವಾರ ನಡೆಸುತ್ತಿರುವ ಪರಿವರ್ತನಾ ಯಾತ್ರೆಯ ಸಮಾರೋಪಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ ಯಾತ್ರೆ ಹೊರಪಡಿಸಿ ಬೇರೆ ಯಾವುದೇ ವಿಚಾರದ ಬಗ್ಗೆಯೂ ಮಾತನಾಡುವ ಸಾಧ್ಯತೆ ಕಡಿಮೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದು, ಈ ಮೂಲಕ ಪರೋಕ್ಷವಾಗಿ ಮೋದಿಯವರು ಮಹದಾಯಿ ವಿವಾದ ಪ್ರಸ್ತಾಪಿಸುವುದಿಲ್ಲ ಎಂದಿದ್ದಾರೆ. 
ಅರಮನೆ ಮೈದಾನದಲ್ಲಿ ನಾಳೆ ನಡೆಯಲಿರುವ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯ ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ಹಾಗೂ ಕಾರ್ಯಕರ್ತನ್ನು ಹುರಿದುಂಬಿಸುವ ಕುರಿತು ಭಾಷಣ ಮಾಡಲಿದ್ದಾರೆ. ಅಲ್ಲದೆ, ಕೇಂದ್ರ ಮತ್ತು ರಾಜ್ಯದ ಪರಿಸ್ಥಿತಿ ಕುರಿತು ಪ್ರಸ್ತಾಪ ಮಾಡಲಿದ್ದಾರೆ. ಉಳಿದ ಯಾವುದೇ ವಿಚಾರಗಳ ಬಗ್ಗೆಯೂ ಪ್ರಸ್ತಾಪಿಸುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ. 
ಪರಿವರ್ತನಾ ರ್ಯಾಲಿ ಹೊರತುಪಡಿಸಿ ಪ್ರಧಾನಿ ಮೋದಿಯವರು ಬೇರಾವುದೇ ವಿಚಾರಗಳ ಬಗ್ಗೆಯೂ ಮಾತನಾಡುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದಾರೆ. 
ಇದೇ ವೇಳೆ ರ್ಯಾಲಿ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಬೆದರಿಕೆ ಹಾಕುತ್ತಿರುವುದರ ಕುರಿತಂತೆ ಮಾತನಾಡಿರುವ ಅವರು, ಯಾರು ಏನೇ ಮಾಡಿದರೂ ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಅಸಾಧ್ಯ. ರ್ಯಾಲಿಯಲ್ಲಿ 4 ಲಕ್ಷಕ್ಕೂ ಅಧಿಕ ಜನರು ಸೇರುತ್ತಿದ್ದಾರೆ. ರ್ಯಾಲಿಗೆ ಆಗಮಿಸುವವರಿಗೆ ಸಾರಿಗೆ, ಆಹಾರ ಸೇರಿದಂತೆ ಉಳಿದ ಎಲ್ಲಾ ರೀತಿಯ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ