ಸೆಲ್ಫಿ ಕ್ಲಿಕ್ಕಿಸಲು ಯತ್ನಿಸಿದ ಕಾರ್ಯಕರ್ತನ ಮೇಲೆ ಗರಂ ಆದ ಸಚಿವ ಡಿ.ಕೆ.ಶಿವಕುಮಾರ್ 
ರಾಜ್ಯ

ಸೆಲ್ಫಿ ಕ್ಲಿಕ್ಕಿಸಲು ಯತ್ನಿಸಿದ ಕಾರ್ಯಕರ್ತನ ಮೇಲೆ ಸಚಿವ ಡಿಕೆ ಶಿವಕುಮಾರ್ ಗರಂ

ಬೆಳಗಾವಿಯಲ್ಲಿ ನಡೆದ ಘಟನೆಯಂತೆಯೇ ಹೊಸಪೇಟೆಯಲ್ಲೂ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ ಕಾರ್ಯಕರ್ತನ ಮೇಲೆ ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಘಟನೆ ಭಾನುವಾರ ನಡೆದಿದೆ...

ಬಳ್ಳಾರಿ: ಬೆಳಗಾವಿಯಲ್ಲಿ ನಡೆದ ಘಟನೆಯಂತೆಯೇ ಹೊಸಪೇಟೆಯಲ್ಲೂ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ ಕಾರ್ಯಕರ್ತನ ಮೇಲೆ ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಘಟನೆ ಭಾನುವಾರ ನಡೆದಿದೆ. 
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಫೆ.10 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಹೊಸಪೇಟೆಯಲ್ಲಿ ನಡೆಯಲಿರುವ ಸಮಾವೇಶ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಹೊಸಪೇಟೆಗೆ ಭೇಟಿ ನೀಡಿದ್ದರು. 
ಡಿ.ಕೆ.ಶಿವಕುಮಾರ್ ಅವರು ಹೆಲಿಪ್ಯಾಡ್ ನಿಂದ ಕೆಳಗಿಳಿಯುತ್ತಿದ್ದಂತೆಯೇ ಸಂತಸಗೊಂಡ ಕಾರ್ಯಕರ್ತರು ಕೂಡಲೇ ಸಚಿವರತ್ತ ಮುಗಿಬೀಳಲು ಆರಂಭಿಸಿದ್ದರು. ಹಲವರು ಸಚಿವರಿಗೆ ಶುಭಾಶಯಗಳನ್ನು ಕೋರಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರ ಹಿಂದೆ ಇದ್ದ ಕಾರ್ಯಕರ್ತನೊಬ್ಬ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನ ನಡೆಸಿದ್ದರು. 
ಇದರಿಂದ ತೀವ್ರವಾಗಿ ಕೆಂಡಾಮಂಡಲಗೊಂಡ ಡಿಕೆಶಿ ಅವರು ಮೊದಲಿಗೆ ಸೆಲ್ಫೀ ಕ್ಲಿಕ್ಕಿಸುವುದನ್ನು ನಿಲ್ಲಿಸುವಂತೆ ಸೂಚಿಸಿದರು. ಆದರೂ ಕಾರ್ಯಕರ್ತ ತನ್ನ ಪ್ರಯತ್ನವನ್ನು ನಿಲ್ಲಿಸದ ಹಿನ್ನಲೆಯಲ್ಲಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ವೇಳೆ ಕಾರ್ಯಕರ್ತನ ಮೊಬೈಲ್ ಫೋನ್ ಕೆಳಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಈ ದೃಶ್ಯಾವಳಿಗಳು ಸ್ಥಳದಲ್ಲಿದ್ದ ಕೆಲವರ ಮೊಬೈಲ್ ಫೋನ್ ಗಳಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!