ವಕೀಲರ ಪ್ರತಿಭಟನೆ 
ರಾಜ್ಯ

ಬೆಂಗಳೂರು: ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಆಗ್ರಹಿಸಿ ವಕೀಲರಿಂದ ಉಪವಾಸ ಸತ್ಯಾಗ್ರಹ

ಹೈಕೋರ್ಟ್‌ನಲ್ಲಿ ಖಾಲಿ ಇರುವ 38 ನ್ಯಾಯಮೂರ್ತಿಗಳ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ವಕೀಲರು ಕೇಂದ್ರ ಸರ್ಕಾರ....

ಬೆಂಗಳೂರು: ಹೈಕೋರ್ಟ್‌ನಲ್ಲಿ ಖಾಲಿ  ಇರುವ 38 ನ್ಯಾಯಮೂರ್ತಿಗಳ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ವಕೀಲರು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ವಿರುದ್ಧ ಸೋಮವಾರ ಸರಣಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. 
ಕರ್ನಾಟಕ ಹೈಕೋರ್ಟ್ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಹಿರಿಯ ವಕೀಲರಾದ ಬಿವಿ ಆಚಾರ್ಯ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ ಪಿ ರಂಗನಾಥ ಸೇರಿದಂತೆ ನೂರಾರು ವಕೀಲರು ಭಾಗವಹಿಸಿದ್ದು, ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆ ಭರ್ತಿ ಮಾಡದಿದ್ದರೆ ವಾರ ಪೂರ್ತಿ ಉಪವಾಸ ಸತ್ಯಾಗ್ರಹ ಮುಂದುವರೆಸುವುದಾಗಿ ಹೇಳಿದ್ದಾರೆ. 
ಒಂದು ವಾರದ ನಂತರವೂ ಸಮಸ್ಯೆ ಪರಿಹರಿಸದಿದ್ದರೆ ದೆಹಲಿಯ ಸಂಸತ್ ಭವನದ ಮುಂದೆ ಧರಣಿ ನಡೆಸುವುದಾಗಿ ವಕೀಲರು ಎಚ್ಚರಿಕೆ ನೀಡಿದ್ದಾರೆ.
ಈ ಮಧ್ಯೆ, ವಕೀಲರ ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾನೂನು ಸಚಿವ ಟಿ ಬಿ ಜಯಚಂದ್ರ ಅವರು ಭೇಟಿ ನೀಡಿದ್ದು, ಕೇಂದ್ರ ಸರ್ಕಾರ ನ್ಯಾಯಾಧೀಶರ ನೇಮಕದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರಧಾನಿ ಮತ್ತು ಕಾನೂನು ಸಚಿವರನ್ನು ಭೇಟಿ ಮಾಡಿ ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು ಎಂದು ಭರವಸೆ ನೀಡಿದ್ದಾರೆ. 
ಪ್ರತಿಭಟನಾ ಸ್ಥಳಕ್ಕೆ ಸಿಎಂ ಭೇಟಿ ನೀಡಿದ ಬಳಿಕ ಆಗಮಿಸಿದ ಕೇಂದ್ರ ಸಚಿವ ಸದಾನಂದಗೌಡ ಅವರು, ನ್ಯಾಯಮೂರ್ತಿಗಳ ನೇಮಕಕ್ಕೆ ಒತ್ತಾಯಿಸಿ ವಕೀಲರು ಪ್ರತಿಭಟನಾ ನಡೆಸುವಂತಹ ಸ್ಥಿತಿ ಬಂದಿರುವುದು ವಿಷಾದಕರ. ಪ್ರತಿಭಟನೆ ಹಿಂಪಡೆಯಿರಿ. ಸಂಬಂಧಪಟ್ಟವರ ಗಮನಕ್ಕೆ ತಂದು ಕೂಡಲೇ ಸಮಸ್ಯೆ ಪರಿಹರಿಸಾಲಗುವುದು ಎಂದು ಭರವಸೆ ನೀಡಿದರು.
ನಾನು ಕಾನೂನು ಸಚಿವನಾಗಿದ್ದಾಗ 10 ಹೆಸರು ಬಂದಿದ್ದವು. ಐದು ಹೆಸರುಗಳಿಗೆ ರಾಜ್ಯ ಸರ್ಕಾರ ತಕರಾರು ತೆಗೆದಿತ್ತು. ರಾಜ್ಯದ ನ್ಯಾಯಮೂರ್ತಿಗಳೂ ಆಕ್ಷೇಪ ಎತ್ತಿದ್ದರು ಎಂದು ಸದಾನಂದಗೌಡ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ