ಫೆ.10 ರಂದು ಬಳ್ಳಾರಿಗೆ ರಾಹುಲ್ ಗಾಂಧಿ ಆಗಮನ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೆಬ್ರುವರಿ 10ರಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಹೈದ್ರಾಬಾದ್ ಕರ್ನಾಟಕ ಪ್ರದೇಶದ ಕೆಲ ಜಿಲ್ಲೆಗಳಿಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.
ಬೆಂಗಳೂರು:ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೆಬ್ರುವರಿ 10ರಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಹೈದ್ರಾಬಾದ್ ಕರ್ನಾಟಕ ಪ್ರದೇಶದ ಕೆಲ ಜಿಲ್ಲೆಗಳಿಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.
ಫೆಬ್ರುವರಿ 1ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ಮಾಡುವ ಮೂಲಕ ರಾಹುಲ್ ಗಾಂಧಿ ಪ್ರವಾಸ ಆರಂಭವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕೊಪ್ಪಳ, ಯಾದಗಿರಿ, ರಾಯಚೂರು, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅವರು ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಸಾರ್ವಜನಿಕ ಸಭೆ ಹೊರತುಪಡಿಸಿ ಕೊಪ್ಪಳ ಜಿಲ್ಲೆಯ ಹುಲಿಗಮ್ಮ ದೇವಸ್ಥಾನ, ಹಾಗೂ ಗವಿ ಸಿದ್ದೇಶ್ವರ ಮಠ, ಕಲಬುರಗಿಯ ಖ್ವಾಜಾ ಬಂಡೇ ನವಾಜ್ ದರ್ಗಾಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಫೆಬ್ರವರಿ 12 ರಂದು ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹೈದ್ರಾಬಾದ್ ಮೂಲಕ ದೆಹಲಿಗೆ ತೆರಳಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.