ಎಚ್ ಡಿ ದೇವೇಗೌಡ (ಸಂಗ್ರಹ ಚಿತ್ರ)
ಹಾಸನ: ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅವರೊಂದಿಗಿನ ವೈಮನಸ್ಯ ಕಾರಣದಿಂದಾಗಿ ಮಹಾಮಸ್ತಕಾಭಿಷೇಕ ಉದ್ಘಾಟನಾ ಕಾರ್ಯಕ್ರಮದಿಂದ ದೂರವುಳಿಯುವ ನಿರ್ಧಾರ ಮಾಡಿದ್ದ ಜೆಡಿಎಸ್ ವರಿಷ್ಟ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರು ಕೊನೆಗೂ ಕಾರ್ಯಕ್ರಮಕ್ಕೆ ಬರಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಹಂದಿದೆ.
ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆನ ವೈಮನಸ್ಯ ಮರೆತು ಮಹಾಮಸ್ತಕಾಭಿಷೇಕ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿ ಸಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ನಿರ್ಧರಿಸಿದ್ದಾರೆ. ಗೌಡರು ದೆಹಲಿಗೆ ತೆರಳುವ ಬಗ್ಗೆ ಮಾಹಿತಿ ಪಡೆದಿದ್ದ ಜಿಲ್ಲಾಡಳಿತ, ಹಿರಿಯ ಕೆಎಎಸ್ ಅಧಿಕಾರಿಯನ್ನು ಸೋಮವಾರ ಸಂಜೆ ದೇವೇಗೌಡರ ನಿವಾಸಕ್ಕೆ ಕಳುಹಿಸಿ ಅವರ ಮನವೊಲಿಸುವಲ್ಲಿ ಸಫಲವಾಯಿತು. ಹೀಗಾಗಿ ಬುಧವಾರ ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಸಿಎಂ ಅವರೊಂದಿಗೆ ದೇವೇಗೌಡರು ವೇದಿಕೆ ಹಂಚಿಕೊಳ್ಳುವುದು ಖಚಿತವಾಗಿದೆ.
ಇದಕ್ಕೂ ಮುನ್ನ, ಭಾನುವಾರ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ್ದ ದೇವೇಗೌಡ, ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುವುದರಿಂದ ಮಹಾಮಸ್ತಕಾಭಿಷೇಕ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics